Saturday, January 25, 2025
ದಕ್ಷಿಣ ಕನ್ನಡರಾಜ್ಯಸುದ್ದಿ

ಕ್ಯಾಪ್ಟನ್ ಬೃಜೇಶ್ ಚೌಟ ನೇತೃತ್ವದ ರಾಮ ಲಕ್ಷ್ಮ್ಮಣ ಜೋಡು ಕರೆ ಕಂಬಳದ ಪೂರ್ವಭಾವಿ ಸಭೆ ; ಜನವರಿ 22ರಂದು “ಮಂಗಳೂರು ಕಂಬಳ”- ಕಹಳೆ ನ್ಯೂಸ್

ಮಂಗಳೂರು, ಡಿ 12 : ಕೂಳೂರಿನ ಗೋಲ್ಡ್‌ಫಿಂಚ್ ಸಿಟಿಯ ರಾಮ ಲಕ್ಷ್ಮ್ಮಣ ಜೋಡು ಕರೆಯಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ನೇತೃತ್ವದ 6ನೇ ವರ್ಷದ ಮಂಗಳೂರು ಕಂಬಳವು 2023ರ ಜನವರಿ 22ರಂದು ನಡೆಯಲಿದೆ. ಆ ಹಿನ್ನಲೆಯಲ್ಲಿ ಕಂಬಳದ ಪೂರ್ವಭಾವಿ ಸಭೆಯು ಶನಿವಾರ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು


ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗಬೇಕು. ಕಂಬಳಕ್ಕೆ ಮೆರುಗು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್. ಶೆಟ್ಟಿ, ವಿಜಯಕುಮಾರ್ ಕಂಗಿನಮನೆ, ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್, ಕಂಬಳ ಸಮಿತಿಯ ಗೌರವ ಸಲಹೆಗಾರ ಪ್ರಸಾದ್ ಕುಮಾರ್ ಶೆಟ್ಟಿ, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಉಪಸ್ಥಿತರಿದ್ದರು.ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿದರು. ಈಶ್ವರ್ ಪ್ರಸಾದ್ ವಂದಿಸಿದರು. ವರುಣ್ ಶೇಣವ ಕಾರ್ಯಕ್ರಮ ನಿರೂಪಿಸಿದರು.