Wednesday, January 22, 2025
ರಾಜಕೀಯರಾಷ್ಟ್ರೀಯಸುದ್ದಿ

ಎರಡನೇ ಬಾರಿಗೆ ಗುಜರಾತ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್; ಕಾರ್ಯಕ್ರಮದಲ್ಲಿ ಮೋದಿ, ಅಮಿತ್ ಷಾ ಭಾಗಿ – ಕಹಳೆ ನ್ಯೂಸ್

ಗುಜರಾತ್​: ಗುಜರಾತ್​ನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಭೂಪೇಂದ್ರ ಪಟೇಲ್ ಗದ್ದುಗೆ ಏರಿದ್ದಾರೆ. ಇಂದು (ಡಿ.12) ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಸಮ್ಮುಖದಲ್ಲಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗಾಂಧಿನಗರದ ಬಳಿ ಇರುವ ಹೆಲಿಪ್ಯಾಡ್ ಮೈದಾನದಲ್ಲಿ ಗುಜರಾತ್​ ರಾಜ್ಯಪಾಲ ಆಚಾರ್ಯ ದೇವ್ರತ್ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಪ್ರಮಾಣವಚನ ಭೋದಿಸಿದ್ದಾರೆ. ಜತೆಗೆ ನೂತನ ಸಂಪುಟದ 20 ಸಚಿವರು ಕೂಡಾ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಬಿಜೆಪಿಯು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ 156 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು. ಇದರೊಂದಿಗೆ ಗುಜರಾತ್‌ನಲ್ಲಿ ಬಿಜೆಪಿಯ ಸತತ 7ನೇ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ತನ್ನದಾಗಿಸಿಕೊಂಡಿದೆ. (ಏಜೆನ್ಸೀಸ್)