Wednesday, January 22, 2025
ದಕ್ಷಿಣ ಕನ್ನಡರಾಜ್ಯಸುದ್ದಿ

ಪತ್ರಕರ್ತರ 37ನೇ ರಾಜ್ಯ ಸಮ್ಮೇಳನಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಹ್ವಾನ – ಕಹಳೆ ನ್ಯೂಸ್

ಮಂಗಳೂರು: ವಿಜಯಪುರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಸಮ್ಮೇಳನಕ್ಕೆ ಧರ್ಮಸ್ಥಳದ ಧರ್ಮಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಹ್ವಾನಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ಹೆಗ್ಗಡೆ ಅವರಿಗೆ ಆಮಂತ್ರಣ ನೀಡಲಾಯಿತು. ಇದೇ ವೇಳೆ ಸಂಘದ ವತಿಯಿಂದ ರಾಜ್ಯಸಭಾ ಸದಸ್ಯರಾಗಿರುವ ಅವರನ್ನು ಅಭಿನಂದಿಸಲಾಯಿತು. ಮಂಗಳೂರಿನಲ್ಲಿ ಪತ್ರಕರ್ತರ ಸಮ್ಮೇಳನ ಸಾನಿಧ್ಯ ವಹಿಸಿ ಅಚ್ಚುಕಟ್ಟಾಗಿ ನಡೆಸಿಕೊಟ್ಟ ಸಂದರ್ಭವನ್ನು ನೆನಪಿಸಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ಡಾ. ವೀರೇಂದ್ರ ಹೆಗ್ಗಡೆ ಅವರು ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಖಜಾಂಚಿ ಬಿ.ಎನ್.ಪುಷ್ಪರಾಜ್, ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ, ರಾಜ್ಯ ಸಮಿತಿ ಸದಸ್ಯ ಕಲ್ಯಾಣ್ ಕುಮಾರ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಚ್ತೈತ್ರೇಶ್ ಇಳಂತಿಲ ಉಪಸ್ಥಿತರಿದ್ದರು.