Friday, January 24, 2025
ಸುದ್ದಿ

ಕಡೇಶಿವಾಲಯ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಡೇಶಿವಾಲಯದಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ಸುರೇಶ್ ಬನಾರಿ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನಾಯ್ಕ ಉಳ್ಳಿಪಾಡಿ ಗುತ್ತು ರವರು ಕಾರ್ಯಕ್ರಮದ ಮಧ್ಯೆ ಆಗಮಿಸಿ ನೆರೆದಂತ ಎಲ್ಲರಿಗೂ ಶುಭಾಶಯಗಳು ಕೋರಿದರು.

ಸಭಾ ಕಾರ್ಯಕ್ರಮದಲ್ಲಿ ಶ್ರೀಮತಿ ಜಯ ಆರ್ ದೇವಾಡಿಗ, ಶ್ರೀ ಸುರೇಶ್ ಪೂಜಾರಿ, ಶ್ರೀ ಶ್ರೀನ ನಾಯ್ಕ, ಶ್ರೀಮತಿ ಪ್ರಮೀಳಾ ಕೋಡಿ, ಶ್ರೀಮತಿ ವಶಿತಾ ನೆತ್ತರ, ಶ್ರೀ ಮಾಧವ ರೈ, ಶ್ರೀ ಶರತ್, ಶ್ರೀ ಗಣೇಶ್ ಆರ್ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಸರಸ್ವತಿ ಕಾರಂತ ಅಣ್ಣೆಂಗಳ ರವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಶ್ರೀಯುತ ಬಾಬು ಪೂಜಾರಿಯವರು ಪ್ರಸ್ತಾವಿಕದೊಂದಿಗೆ ಅತಿಥಿಗಳನ್ನು ಸ್ವಾಗತಿಸಿ, ಎಸ್ ಡಿ ಎಂ ಸಿ ಅಧ್ಯಕ್ಷ ಶ್ರೀ ಹರಿಶ್ಚಂದ್ರ ಎಂ ಧನ್ಯವಾದವಿತರು. ಶಾಲಾ ಸಹ ಶಿಕ್ಷಕ ಸತೀಶ್ ರಾವ್ ಕಾರ್ಯಕ್ರಮ ನಿರೂಪಿಸಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.