Friday, January 24, 2025
ಸುದ್ದಿ

ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ : ರೂ.20 ಲಕ್ಷ ಅನುದಾನದಲ್ಲಿ ಸಂಪರ್ಕ ರಸ್ತೆ ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ. ರಘುಪತಿ ಭಟ್ ಗುದ್ದಲಿ ಪೂಜೆ – ಕಹಳೆ ನ್ಯೂಸ್

ಉಡುಪಿ : ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ : ರೂ.20 ಲಕ್ಷ ಅನುದಾನದಲ್ಲಿ ಸಂಪರ್ಕ ರಸ್ತೆ, ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ಗುದ್ದಲಿ ಪೂಜೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರ ಶಿಫಾರಸು ಮೇರೆಗೆ ಕೆಆರ್ ಐಡಿಎಲ್ ನಿಂದ ಮಂಜೂರುಗೊಂಡಿರುವ ರೂ.20 ಲಕ್ಷಗಳ ಅನುದಾನದಿಂದ ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಸಂಪರ್ಕ ರಸ್ತೆ ಹಾಗೂ ಪ್ರಾಂಗಣ ಅಭಿವೃದ್ಧಿಗೆ ಶಾಸಕ ಕೆ.ರಘುಪತಿ ಭಟ್ ರವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಮಾಜಿ ಅಧ್ಯಕ್ಷರಾದ ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ, ತಾ.ಪಂ. ನಿಕಟಪೂರ್ವ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರಾದ ಸುಜಾತ ಶೆಟ್ಟಿ, ಭಾರತಿ ಭಾಸ್ಕರ್, ರಾಜೇಶ್ ಸುವರ್ಣ, ಲಕ್ಷ್ಮಣ ಪೂಜಾರಿ, ಹರೀಶ್ ಪಾಲನ್ ಕಪ್ಪೆಟ್ಟು, ಗ್ರಾ.ಪಂ. ನಿಕಟಪೂರ್ವ ಸದಸ್ಯೆ ದಯಾಶಿನಿ, ಕೆಆರ್‍ಐಡಿಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರ ಹೇಮಂತ್, ಅಧಿಕಾರಿಗಳು, ಸಂಘದ ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಸಂಘದ ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ, ಸಂಘದ ಆಡಳಿತ ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ರಮೇಶ್ ಕೋಟ್ಯಾನ್, ವಿನಯ್ ಕುಮಾರ್, ನಿತಿನ್ ಕುಮಾರ್ ಹಾಗೂ ಸ್ಥಳೀಯರಾದ ಅಚ್ಯುತ ಪೂಜಾರಿ, ಜನಾರ್ದನ ಪೂಜಾರಿ, ಸುನೀತ, ಮಾಲತಿ, ಯಶೋದ, ಸುಗಂಧಿ, ಸುಮತಿ ಮುಂತಾದವರು ಉಪಸ್ಥಿತರಿದ್ದರು.