Sunday, January 26, 2025
ಸುದ್ದಿ

ಶಾಸಕ ಕೆ.ರಘುಪತಿ ಭಟ್ ರವರಿಗೆ ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಗೌರವಾರ್ಪಣೆ – ಕಹಳೆ ನ್ಯೂಸ್

ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಅವರನ್ನು ಶಾಲು ಹೊದೆಸಿ ಗೌರವಿಸಿದರು. ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಶ್ರೀ ದೇವರ ಪ್ರಸಾದವನ್ನು ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಮಾಜಿ ಅಧ್ಯಕ್ಷರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ, ತಾ.ಪಂ. ನಿಕಟಪೂರ್ವ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಗ್ರಾಮ ಪಂಚಾಯತ್ ಸದಸ್ಯರಾದ ಸುಜಾತ ಶೆಟ್ಟಿ, ಭಾರತಿ ಭಾಸ್ಕರ್, ರಾಜೇಶ್ ಸುವರ್ಣ, ಲಕ್ಷ್ಮಣ ಪೂಜಾರಿ, ಗ್ರಾ.ಪಂ. ನಿಕಟಪೂರ್ವ ಸದಸ್ಯೆ ದಯಾಶಿನಿ, ಸಂಘದ ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಸಂಘದ ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಆಡಳಿತ ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ರಮೇಶ್ ಕೋಟ್ಯಾನ್, ವಿನಯ್ ಕುಮಾರ್, ನಿತಿನ್ ಕುಮಾರ್, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ ಹಾಗೂ ಸ್ಥಳೀಯರಾದ ಅಚ್ಯುತ ಪೂಜಾರಿ, ಜನಾರ್ದನ ಪೂಜಾರಿ, ಸುನೀತ, ಮಾಲತಿ, ಸುಗಂಧಿ, ಸುಮತಿ ಮುಂತಾದವರು ಉಪಸ್ಥಿತರಿದ್ದರು.