ಪೋಷಕರ ಜತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ‘ಅನುಭವʼ ಚಿತ್ರದ ಖ್ಯಾತಿಯ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ವರದಕ್ಷಿಣೆ ನೀಡುವಂತೆ ಪೋಷಕರ ಜತೆ ಸೇರಿ ಅತ್ತಿಗೆಗೆ ನಟಿ ಅಭಿನಯ ಅವರು ಕಿರುಕುಳ ನೀಡಿದ ಆರೋಪವಿತ್ತು. ಇದೀಗ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಚಿಕ್ಕ ವಯಸ್ಸಿನಲ್ಲೇ ನಟಿ ಅಭಿನಯ ಕನ್ನಡ ಚಿತ್ರರಂಗಕ್ಕೆ ಪಾದಾಪರ್ಣೆ ಮಾಡಿದರು.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ
ಇವರು ಛಾಯಾಗ್ರಾಹಕ ಉಮಾಕಾಂತ್ ಯವರ ಜೊತೆ 2009 ರಲ್ಲಿ ಧರ್ಮಸ್ಥಳದಲ್ಲಿ ವಿವಾಹವಾದರು.ಮದುವೆ ನಂತರ ಬ್ರೇಕ್ ತೆಗೆದುಕೊಂಡಿದ್ದ ನಟಿ, ಈಚೆಗೆ ಮತ್ತೇ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ವಾಪಾಸ್ಸಾಗಿದ್ದರು.