Monday, January 20, 2025
ಸುದ್ದಿ

ಕಳೆಂಜ ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಿ.25ರಿಂದ 30ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ : ಡಿ.21ರಂದು ಬೆಳಿಗ್ಗೆ ಕ್ಷೇತ್ರದಲ್ಲಿ ನಡೆಯಲಿದೆ ಗೊನೆ ಮುಹೂರ್ತ – ಕಹಳೆ ನ್ಯೂಸ್

ಪೆರ್ನೆ-ಬಿಳಿಯೂರು ಗ್ರಾಮದ ಕಳೆಂಜ ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಡಿ.25ರಿಂದ 30 ರವರೆಗೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನಲೆಯಲ್ಲಿ ಡಿ.21 ರಂದು ಬೆಳಿಗ್ಗೆ ಕ್ಷೇತ್ರದಲ್ಲಿ ಗೊನೆ ಮುಹೂರ್ತವು ನಡೆಯಲಿದೆ. ಎಲ್ಲಾ ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಬೇಕಾಗಿ ಸಮಿತಿ ವಿನಂತಿಸಿಕೊ0ಡಿದೆ.

ಪೆರ್ನೆ-ಬಿಳಿಯೂರು ಗ್ರಾಮದ ಕಳೆಂಜ ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು ಊರಿನ ಭಕ್ತರು ಕ್ಷೇತ್ರದಲ್ಲಿ ಭಕ್ತಿಯಿಂದ ಕೆಲಸ ಕಾರ್ಯಗಳನ್ನ ನಡೆಸುತ್ತಿದ್ದು, ಇನ್ನೊಂದು ಕಡೆ ಆಮಂತ್ರಣ ಪತ್ರ ವಿತರಣಾ ಕಾರ್ಯಕ್ರಮವು ಭರದಿಂದ ಸಾಗುತ್ತಿದೆ.

ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದ್ದರು. ಇನ್ನು ಡಿ. 25 ರಿಂದ ಡಿ. 30ರ ವರೆಗೆ ಅಷ್ಠಬಂಧ ಬ್ರಹ್ಮಕಲಶೋತ್ಸವದಲ್ಲಿ ಎಡನೀರು ಮಠಾಧೀಶ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಸೋದೆ ಮಠಾಧೀಶ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಇವರುಗಳ ಶುಭಾಶೀರ್ವಾದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಧಾರ್ಮಿಕ ಸಭೆಗಳಲ್ಲಿ ಒಡಿಯೂರು ಮಠಾಧೀಶರು, ಮಾಣಿಲ ಮಠಾಧೀಶರು, ಆನೆಗುಂದಿ ಮಹಾಸಂಸ್ಥಾನದ ಮಠಾಧೀಶರು ಹಾಗೂ ವಿವಿಧ ಕ್ಷೇತ್ರದ ವಿದ್ವಾಂಸರು ಭಾಗವಹಿಸಲಿದ್ದಾರೆ.