Recent Posts

Monday, January 20, 2025
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ವೇಶ್ಯಾವಾಟಿಕೆಗೆ ನನ್ನನ್ನ ತಳ್ಳುತ್ತಿದ್ರು, ಆದ್ರೆ ನಾನು ಒಪ್ಪಲಿಲ್ಲ ; ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು : ಖ್ಯಾತ ನಟಿ ಅಭಿನಯ ಅತ್ತಿಗೆ ಕಣ್ಣೀರು – ಕಹಳೆ ನ್ಯೂಸ್

ಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ ನರಕವನ್ನೂ ಅನುಭವಿಸಿದೆ. ತಿನ್ನೋಕೆ ಒಂದ್ ರೊಟ್ಟಿ, ಸ್ನಾನ ಮಾಡೋಕೆ ಒಂದ್ ಬಕೆಟ್ ನೀರು ಜೊತೆಗೆ ಪರಪುರುಷನ ಜೊತೆ ಸಹಕರಿಸು ಅಂತ ಚಿತ್ರಹಿಂಸೆ ಕೊಡುತ್ತಿದ್ದರು. ಪರಪುರುಷನನ್ನು ಮನೆಗೂ ಕರೆದುಕೊಂಡು ಬರುತ್ತಿದ್ದರು. ಅಭಿನಯ ಚಿತ್ರ ನಟಿಯಾದರೂ, ಅವರು ನನ್ನ ನೆರವಿಗೆ ಬರಲಿಲ್ಲ. ಅವರೂ ಕೂಡ ಹಿಂಸೆ ಕೊಟ್ಟರು ಎಂದು ಮಾತನಾಡಿದ್ದಾರೆ ಲಕ್ಷ್ಮಿದೇವಿ. 

ಏನಿದು ಪ್ರಕರಣ?
ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು.

ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.