Wednesday, January 22, 2025
ಸುದ್ದಿ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ . ಸಂಪ್ಯ ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷ ತೇರ್ಗಡೆಹೊಂದಿದ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಉದ್ಘಾಟಕರಾಗಿ ಬೆಳ್ಳಾರೆ ಸ. ಪ.ಪೂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಬಿ.ವಿ ಸೂರ್ಯನಾರಾಯಣ್‍ರವರು ದೀಪ ಪ್ರಜ್ವಲಿಸಿ, ಬೀಳ್ಕೋಡುವ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಕಿವಿಮಾತುಗಳ್ಳಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲುರವರು ಬೀಳ್ಕೋಡುವ ಎಲ್ಲಾ ವಿದ್ಯಾರ್ಥಿಗಳೂ ಕೆಲಸಪಡೆದಿರುವುದು ಹಾಗೂ ಈ ವೃತ್ತಿಪರ ಪದವಿಯ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಸಂತಸ ವ್ಯಕ್ತಪಡಿಸಿ, ವಿದ್ಯಾಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನಲ್ಲಿ ನಡೆದ ಸಾಂಸ್ಕøತಿಕ ಹಾಗೂ ಕ್ರೀಡಾಸ್ಪರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಅರಣ್ಯಾಧಿಕಾರಿ ಶ್ರೀ ಕೃಷ್ಣಪ್ಪ, ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿಯಾದ ಶ್ರೀಮತಿ ಕಲಾವತಿ, ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿಯಾದ ಅರ್ಪಿತ್ ಟಿ. ಎ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಗನ್ ದೀಪ್ ಎ, ಬಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಗನ್ ದೀಪ್ ಎ, ಬಿ ಸ್ವಾಗತಿಸಿ, ವಿದ್ಯಾರ್ಥಿನಿ ಸೃಷ್ಟಿ ಹೆಚ್.ಜಿ ವಂದಿಸಿದರು. ವಿದ್ಯಾರ್ಥಿನಿ ಪ್ರಗತಿ ಕೆ.ಎಚ್, ಅವರು ಕಾರ್ಯಕ್ರಮವನ್ನು ನಿರೂಪಿಸಿದರು.