Wednesday, January 22, 2025
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಗೆ ಚಾಲನೆ ; ಸಚಿವ ಆನಂದ್‌ ಸಿಂಗ್‌, ವಿ. ಸುನಿಲ್‌ ಕುಮಾರ್‌ ಭಾಗಿ – ಕಹಳೆ ನ್ಯೂಸ್


ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು


ಬೆಳ್ತಂಗಡಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಸಮಾರಂಭ ಡಿ. 17ರಂದು ಬೆಳಗ್ಗೆ 10 ಗಂಟೆಗೆ ಸ್ಥಾನಘಟ್ಟದಲ್ಲಿ ನೆರವೇರಲಿದೆ.

ರಾಜ್ಯಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ. ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸುವರು. ಸಚಿವ ಆನಂದ್‌ ಸಿಂಗ್‌ ನಾಮಫಲಕ ಅನಾವರಣ ಮಾಡುವರು. ಶಾಸಕ ಹರೀಶ್‌ ಪೂಂಜ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.