“ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ, ಲವ್ ಜಿಹಾದ್ ಘಟನೆಗಳನ್ನು ತಡೆಯಲು ವಿಶೇಷ ಲವ್ ಜಿಹಾದ್ ವಿರೋಧಿ ಪೋಲಿಸ್ ದಳವನ್ನು ಸ್ಥಾಪಿಸಿ !” : ಹಿಂದೂ ಜನಜಾಗೃತಿ ಸಮಿತಿಯಿಂದ ಉಪತಹಸಿಲ್ದಾರರಾದ ಕೇ. ಟಿ. ಮನೋಹರ್ ರವರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ – ಕಹಳೆನ್ಯೂಸ್
ಕಡಬ : ಸದ್ಯ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೋಲಿಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಕಡಬ ತಾಲೂಕು ಕಚೇರಿಯಲ್ಲಿ ಉಪ ತಹಸಿಲ್ದಾರರಾದ ಕೇ. ಟಿ. ಮನೋಹರ್ ರವರ ಮೂಲಕ ಮಾನ್ಯ ಮುಖ್ಯಮಂತ್ರಿ ಕರ್ನಾಟಕ ಸರಕಾರ ಇವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಜರಂಗದಳದ ಪ್ರಮುಖರಾದ ಶ್ರೀ. ಪ್ರಮೋದ್ ರೈ, ಹಿಂದೂ ಸಂಘಟನೆಯ ಪ್ರಮುಖರಾದ ಶ್ರೀ. ರಘುನಾಥ್ ನಾಯಕ್ ,ಕೋಡಿಂಬಾಳದ ಶ್ರೀ. ಬಾಲಕೃಷ್ಣ ರೈ, ಪ್ರಶಾಂತ್ ಪಂಜೋಡಿ , ಹಿಂದೂ ಜನಜಾಗೃತಿಯ ಶ್ರೀ. ಶಾಂತಪ್ಪ ಗೌಡ, ಶ್ರೀ. ಬಾಲಕೃಷ್ಣ ಶೆಟ್ಟಿ ಮುಂತಾದವರು ಪಾಲ್ಗೊಂಡಿದ್ದರು.
ದೆಹಲಿಯ ಜಿಹಾದಿ ಅಫ್ತಾಬ್ ಹಿಂದೂ ಯುವತಿ ಶ್ರದ್ಧಾ ವಾಲ್ಕರ್ಳನ್ನು ಲವ್ ಜಿಹಾದ್ ಪ್ರಕರಣದಲ್ಲಿ 35 ತುಂಡುಗಳಾಗಿ ಕತ್ತರಿಸಿದ ಘಟನೆಯ ನಂತರ ದೇಶಾದ್ಯಂತ ಲವ್ ಜಿಹಾದ್ ವಿರುದ್ಧ ತೀವ್ರ ಆಕ್ರೋಶದ ಅಲೆ ಹಬ್ಬಿದೆ. ರ್ನಾಟಕದಲ್ಲೂ ಸಹ ಲವ್ ಜಿಹಾದ್ ಘಟನೆಗಳು ಹೆಚ್ಚಾಗಿದೆ. ಮರ್ಚ್ 2022 ರಂದು ಗದಗದಲ್ಲಿ ಅಪೂರ್ವ ಯುವತಿಯನ್ನು ಮಹಮ್ಮದ್ ಇಜಾಜ್ನು ಇಸ್ಲಾಮ್ಗೆ ಮತಾಂತರ ಮಾಡಿ, ಆಕೆಯ ಮೇಲೆ 25 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲು ಪ್ರಯತ್ನಿಸಿದ್ದನು. ಜನವರಿ 2022 ರಂದು ಮಂಗಳೂರಿನಲ್ಲಿ ದೀಪ್ತಿ ರ್ಲಾ ಎನ್ನುವ ಕೊಡಗಿನ ದಂತ ವೈದ್ಯಕೀಯ ವಿಧ್ಯರ್ಥಿನಿಯು ಅಬ್ದುಲ್ ರೆಹಮಾನ್ ಮದುವೆಯಾಗಿ ಆಕೆಯನ್ನು ಇಸ್ಲಾಮ್ಗೆ ಮತಾಂತರ ಮಾಡಿ, ಆಕೆಯನ್ನು ಐಸಿಸ್ ಭಯೋತ್ಪಾಧನಾ ಚಟುವಟಿಕೆಯಲ್ಲಿ ತೊಡಗಿಸಿದಾಗ ಆಕೆಯನ್ನು ರಾಷ್ಟ್ರೀಯ ತನಿಖಾ ದಳವು ಬಂಧಿಸಿದೆ. ಅಕ್ಟೋಬರ್ 2022 ರಂದು ರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಶಿವಮೊಗ್ಗದಲ್ಲಿ ಶಾಹಿನ್ ಗ್ಯಾಂಗ್ ಎನ್ನುವ ಮುಸ್ಲಿಂ ಯುವತಿಯರ ಗುಂಪು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಡಿಯಲ್ಲಿ ತರಬೇತಿ ಪಡೆದು ಕಾಲೇಜುಗಳಲ್ಲಿ ಹಿಂದೂ ಯುವತಿಯರನ್ನು ಮುಸಲ್ಮಾನ್ ಯುವಕರಿಗೆ ಪರಿಚಯಿಸಿ ಲವ್ ಜಿಹಾದ್ನಲ್ಲಿ ಸಿಲುಕಿಸಿ ಅವರನ್ನು ಇಸ್ಲಾಂಗೆ ಮತಾಂತರ ಮಾಡುವ ಪ್ರಕರಣಗಳು ನಡೆಯುತ್ತಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ ತನಿಖಾ ವರದಿಯಲ್ಲಿ ತಿಳಿಸಿದೆ. ರ್ನಾಟಕದಲ್ಲಿ 2014 ರಿಂದ 2019 ರ ವರೆಗೆ 21,000 ಯುವತಿಯರು ನಾಪತ್ತೆಯಾಗಿದ್ದಾರೆ. ಈ ಎಲ್ಲ ಗಂಭೀರ ಘಟನೆಗಳನ್ನು ಗಮನಕ್ಕೆ ತಗೆದುಕೊಂಡು ಸರಕಾರವು ರಾಜ್ಯದಿಂದ ಮಹಿಳೆಯರು ಮತ್ತು ಹುಡುಗಿಯರ ನಾಪತ್ತೆಯ ಹಿಂದೆ ಏನಾದರೂ ಪಿತೂರಿ ಇದೆಯೇ ಅಥವಾ ಅದರ ಹಿಂದೆ ಯಾವುದಾದರೂ ಲವ್ ಜಿಹಾದ್’ ಇದೆಯೇ ಎಂದು ತನಿಖೆ ಮಾಡಲು ಗೃಹ ಕಚೇರಿ ಸ್ವತಂತ್ರ ತಂಡವನ್ನು ನೇಮಿಸಬೇಕು, ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ಪೆÇಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕು. ಇಂತಹ ಪ್ರಕರಣಗಳಲ್ಲಿ ‘ಲವ್ ಜಿಹಾದ್’ ಹೆಸರಿನಲ್ಲಿ ಅಪರಾಧಗಳನ್ನು ದಾಖಲಿಸಬೇಕು. ಎಂದು ಈ ಮೂಲಕ ಒತ್ತಾಯಿಸುತ್ತೇವೆ ಎಂದರು.