Friday, November 22, 2024
ಸುದ್ದಿ

ಬಿ.ಸಿ.ರೋಡು: ಮೂಡುಬಿದ್ರೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ. ಎಂ.ಮೋಹನ ಆಳ್ವ ನೇತೃತ್ವದಲ್ಲಿ ನಡೆಯಲಿರುವ ಸ್ಕೌಟ್ ಮತ್ತು ಗೈಡ್ಸ್ ನ ಅಂತರ್ ರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಹೊರೆಕಾಣಿಕೆ ಸಮರ್ಪಣೆ – ಕಹಳೆ ನ್ಯೂಸ್

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಬಂಟ್ವಾಳ: ಮೂಡುಬಿದ್ರೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ. ಎಂ.ಮೋಹನ ಆಳ್ವ ನೇತೃತ್ವದಲ್ಲಿ ಇದೇ ಡಿ. 21ರಿಂದ 27ರ ತನಕ ನಡೆಯಲಿರುವ ಸ್ಕೌಟ್ ಮತ್ತು ಗೈಡ್ಸ್ ನ ಅಂತರ್ ರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಿಂದ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ಹೊರಟಿತು. ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಮುಖ್ಯ ವೃತ್ತ ಸಮೀಪದ ಗೋಲ್ಡನ್ ಮೈದಾನದಲ್ಲಿ ಒಡಿಯೂರು ಕ್ಷೇತ್ರದ ಮಾತಾನಂದಮಯೀ ಮೆರವಣಿಗೆಗೆ ಚಾಲನೆ ನೀಡಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ರೂ 35 ಕೋಟಿ ವೆಚ್ಚದಲ್ಲಿ ನಡೆಯುವ ಜಾಂಬೂರಿಗೆ ಸರ್ಕಾರ ಈಗಾಗಲೇ ರೂ 10 ಕೋಟಿ ಅನುದಾನ ಒದಗಿಸಿದೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ದೇಶದಲ್ಲಿ ಪ್ರಥಮ ಬಾರಿಗೆ ಮೂಡುಬಿದ್ರೆಯಲ್ಲಿ ನಡೆಯುತ್ತಿರುವ ಅಂತರ್ ರಾಷ್ಟ್ರೀಯ ಮಟ್ಟದ ಜಾಂಬೂರಿ ಜಿಲ್ಲೆಗೆ ಹೆಮ್ಮೆ ಎಂದರು.

ಈ ಸಂದರ್ಭದಲ್ಲಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಮಾಜಿ ಸಚಿವ ಬಿ.ರಮಾನಾಥ ರೈ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ, ಎ.ರುಕ್ಮಯ ಪೂಜಾರಿ, ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜ ಶುಭ ಹಾರೈಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಮಿತಿ ಕಾರ್ಯಾ ಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜಡ್ತಿಲ, ಜಗನ್ನಾಥ ಚೌಟ ಬದಿಗುಡ್ಡೆ, ಹೊರೆಕಾಣಿಕೆ ಸಮಿತಿ ಸಂಚಾಲಕ ಚಂದ್ರಹಾಸ ಶೆಟ್ಟಿ ರಂಗೋಲಿ, ಪ್ರಧಾನ ಕಾರ್ಯದರ್ಶಿ ಬಿ.ಮಹಮ್ಮದ್ ತುಂಬೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಜಯಾನಂದ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಸುದೀಪ್ ಕುಮಾರ್ ಶೆಟ್ಟಿ, ಪುಷ್ಪರಾಜ್ ಚೌಟ, ಬೇಬಿ ಕುಂದರ್, ಡೊಂಬಯ ಅರಳ, ಮೋಹನದಾಸ್ ಕೊಟ್ಟಾರಿ, ಕಿಶೋರ್ ಭಂಡಾರಿ ಉಪಸ್ಥಿತರಿದ್ದರು.