Thursday, April 17, 2025
ಸುದ್ದಿ

ಬೆಂಗಳೂರಿನಿಂದ ಮಂಗಳೂರಿಗೆ ಅಕ್ರಮವಾಗಿ ಮಾದಕ ವಸ್ತು ಸಾಗಾಟ : ನಾಲ್ವರ ಬಂಧನ – ಕಹಳೆ ನ್ಯೂಸ್

ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಅಕ್ರಮವಾಗಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ನರಿಂಗಾನ ಗ್ರಾಮದ ತೌಡುಗೋಳಿ ಎಂಬಲ್ಲಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಕಾರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2 ಲಕ್ಷ ರೂ. ಮೌಲ್ಯದ ಎಂಡಿಎಂಎ ಮತ್ತು ಗಾಂಜಾವನ್ನು ಕೊಣಾಜೆ ಪೊಲೀಸರು ಕಾರ್ಯಾ ಚರಣೆ ನಡೆಸಿ ವಶಕ್ಕೆ ಪಡೆದಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶನಿವಾರ ರಾತ್ರಿ ಬೋಳಿಯಾರ್‌ನಲ್ಲಿ ದಾಳಿ ನಡೆಸಿ ನಿಷೇಧಿತ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮಾರುತಿ ಆಲ್ಟೊ ಕಾರು ಸಮೇತ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪಿಎಸ್‌ಐ ಶರಣಪ್ಪ ಅವರ ತಂಡವು ದಾಳಿ ನಡೆಸಿ ನರಿಂಗಾನ ಗ್ರಾಮದ ನಿವಾಸಿಗಳಾದ ಮೊಯ್ದಿನ್‌ ಹಫೀಜ್‌ (36) ಮಹಮ್ಮದ್‌ ಸಿರಾಜ್‌ (43) ಅಡ್ಯಾರ್‌ ಕಟ್ಟೆ,ವಳಚ್ಚಿಲ್‌ ನಿವಾಸಿ ಇಕ್ಬಾಲ್‌ (30) ಕೋಡಿಕಲ್‌, ಅಶೋಕ ನಗರ ನಿವಾಸಿ ಮಹಮದ್‌ ಅಝೀಜ್‌ (33) ನನ್ನು ಬಂಧಿಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ