Thursday, January 23, 2025
ಸುದ್ದಿ

ಪಾಕಿಸ್ತಾನದ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ –ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆಯೂ, ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಗಳು ದೊರೆತ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಕಾರ್ಯಾಚರಣೆ ಬದಲಿಸಿ ಭದ್ರತಾ ಪಡೆ , ಎನ್ಕೌಂಟರ್ ದಾಳಿ ನಡೆಸಿದೆ.

ಹತ್ಯೆಯಾದ ಮೂವರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. ಭಯೋತ್ಪಾದಕರಲ್ಲಿ ಒಬ್ಬನಾದ ಲತೀಫ್ ಲೋನ್ ಕಾಶ್ಮೀರಿ ಪಂಡಿತ ಪುರಾಣ ಕೃಷ್ಣ ಭರತ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದು, ಮತ್ತೊಬ್ಬ ಉಗ್ರ ಉಮರ್ ನಜೀರ್ , ನೇಪಾಳದ ಟಿಲ್ ಬಹದ್ದೂರ್ ಥಾಪಾ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.