Recent Posts

Sunday, January 19, 2025
ಸುದ್ದಿ

Breaking News : ಗೌರಿ ಲಂಕೇಶ್ ಹತ್ಯೆ ಪ್ರಕರಣ ; ಉಡುಪಿಯ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರು ಎಸ್ ಐಟಿ ವಶಕ್ಕೆ – ಕಹಳೆ ನ್ಯೂಸ್

ಉಡುಪಿ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಇಬ್ಬರನ್ನು ಎಸ್ ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿಯಲ್ಲಿ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದ್ದು , ಇವರು ಹಿಂದೂ ಜಾಗರಣ ವೇದಿಕೆಯ ಪಡುಬಿದ್ರಿ ಹಾಗೂ ಕಾಪು ಸಂಘಟನೆಯ ಪ್ರಮುಖರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂದೇಶ್ ಶೆಟ್ಟಿ ಪಾದೆಬೆಟ್ಟು (28) ಹಾಗೂ ಯುವರಾಜ್ ಕಂಚಿನಡ್ಕ(30) ಬಂಧಿತರು. ಬೆಂಗಳೂರು ಎಸ್ ಐ ಟಿ ದಳದ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನು ಸ್ಥಳೀಯ ಪೊಲೀಸರ ಸಹಾಯ ಪಡೆದು ಮನೆಯಿಂದ ವಶಕ್ಕೆ ಪಡೆಯಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಗೌರಿ ಹತ್ಯೆ ಪ್ರಕರಣದ ಆರೋಪಿಗಳೊಂದಿಗೆ ಲಿಂಕ್ ಹೊಂದಿದ್ದರು ಎಂಬ ಆರೋಪ ಇವರಿಬ್ಬರ ಮೇಲಿದೆ.