Sunday, January 19, 2025
ಸುದ್ದಿ

ಪತ್ರಕರ್ತರ ಜಿಲ್ಲಾ ಸಮ್ಮೇಳನದ ಲಾಂಛನ ಅನಾವರಣಗೊಳಿಸಿದ ಡಾ.ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.3 ರಂದು ನಡೆಯಲಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅನಾವರಣಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದ ಡಾ.ಹೆಗ್ಗಡೆ ಅವರು ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಖಜಾಂಚಿ ಬಿ.ಎನ್.ಪುಷ್ಪರಾಜ್ , ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈ , ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲು, ಪ್ರಧಾನ ಕಾರ್ಯದರ್ಶಿ ಚೈತ್ರೇಶ್ ಇಳಂತಿಲ , ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಉಪಸ್ಥಿತರಿದ್ದರು.