Tuesday, January 21, 2025
ಸುದ್ದಿ

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾಲಯ (ಸ್ವಾಯತ್ತ) ದಲ್ಲಿ ಪದವಿ ಹಾಗೂ ಸನಾತಕೋತ್ತರ ಪತ್ರಿಕೊದ್ಯಮ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ಬದಲಾದ ಪತ್ರಿಕೋದ್ಯಮದ ಸ್ವರೂಪ-ಒಂದು ಸಂವಾದ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಇಂದು ಸಾಮಾಜಿಕ ಜಾಲತಾಣಗಳ ಮೂಲಕ ನಾವು ಹಲವಾರು ಸುದ್ದಿಗಳನ್ನು ತಿಳಿದುಕೊಳ್ಳಬಹುದು. ಆದರೆ ನಮಗೆ ಲಭಿಸಿದ ಸುದ್ದಿಯನ್ನು ಯಾವ ರೀತಿಯಲ್ಲಿ ವಿಶ್ಲೇಷಣೆ ಮಾಡಬೇಕು ಎಂಬುವುದನ್ನು ಪತ್ರಕರ್ತರು ಯೋಚನೆ ಮಾಡಬೇಕು. ಸುದ್ದಿ ವಿಶ್ಲೇಷಣೆಯು ಈ ಕಾಲಘಟ್ಟದಲ್ಲಿ ಮಾಧ್ಯಮದಿಂದ ಜನರು ನಿರೀಕ್ಷಿಸುವ ವಿಚಾರವಾಗಿದ್ದು ಪತ್ರಕರ್ತರು ಈ ವಿಚಾರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ್ ಪ್ರದೀಪ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾಲಯ(ಸ್ವಾಯತ್ತ) ದಲ್ಲಿ ಪದವಿ ಹಾಗೂ ಸನಾತಕೋತ್ತರ ಪತ್ರಿಕೊದ್ಯಮ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ಬದಲಾದ ಪತ್ರಿಕೋದ್ಯಮದ ಸ್ವರೂಪ-ಒಂದು ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ದುಡಿಯಬೇಕಾದರೆ ಪತ್ರಕರ್ತರು ನೀತಿ ಸಂಹಿತೆಗಳನ್ನು ಪಾಲಿಸಬೇಕು ಹಾಗೂ ಸಮಾಜಕ್ಕೆ ಪೂರಕವಗಉವಂತಹ ವಿಚಾರಗಳನ್ನು ಮಾಧ್ಯಮಗಳಲ್ಲಿ ಭಿತ್ತರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.

ವೇದಿಕೆಯಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯಾ.ಪಿ.ಆರ್ ನಿಡ್ಪಳ್ಳಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಂಯೋಜಕಿ ತಾರಾ ವಂದಿಸಿ, ವಿದ್ಯಾರ್ಥಿ ಮಂಜುನಾಥ ಜೋಡುಕಲ್ಲು ನಿರ್ವಹಿಸಿದರು.