Recent Posts

Friday, November 22, 2024
ರಾಜ್ಯಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯ ಸಾರ್ವಜನಿಕ ಸ್ಥಳದಲ್ಲಿರುವ ಹಜರತ್ ಖಾದ್ರಿ ದರ್ಗಾ ತೆರವು ಕಾರ್ಯಾಚರಣೆ, 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಲ್ಲಿಯ ಭೈರಿದೇವರಕೊಪ್ಪದ ಸಾರ್ವಜನಿಕ ಸ್ಥಳದಲ್ಲಿರುವ ಹಜರತ್ ಸೈಯದ್ ಮಹಮ್ಮುದ್ ಶಾ ಖಾದ್ರಿ ದರ್ಗಾದ ಒಂದು ಭಾಗ ಹಾಗೂ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಚರಣೆ ಬುಧವಾರ ಬೆಳಿಗ್ಗೆ ಆರಂಭವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದರ್ಗಾದ ಸುತ್ತಮುತ್ತ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಂದ 200 ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನೀಯೋಜಿಸಿ ಸೂಕ್ತ ಭದ್ರತೆ ನೀಡಲಾಗಿದೆ.
ಮೂರು ಜೆಸಿಬಿ ಕಾರ್ಯಚರಣೆ ನಡೆಸಿದ್ದು, ಈಗಾಗಲೇ ದರ್ಗಾದ ಸುತ್ತಮುತ್ತಲಿನ ವಾಣಿಜ್ಯ ಬಳಿಗೆ ಹಾಗೂ ವಸ್ತುಗಳನ್ನು ತೆರವುಗೊಳಿಸಲಾಗಿದೆ. ಅಂತಿಮ ವಿಧಿ-ವಿಧಾನ ಸಲ್ಲಿಸಿದ ಬಳಿಕ ಗೋರಿ ತೆರವು ಗೊಳಿಸಲು ಅಂಜುಮನ್ ಸಂಸ್ಥೆ ಮುಖಂಡರು ಬಿಆರ್ ಟಿಎಸ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಿದ್ದಾರೆ. ಅದರಂತೆ ತೆರವು ಕಾರ್ಯಚರಣೆ ನಡೆಯಲಿದೆ.
ಜಿಲ್ಲಾಧಿಕಾರಿ ಗುರದತ್ತ ಹೆಗಡೆ, ಬಿಆರ್ ಟಿಎಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ಭರತ್, ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲಕೃಷ್ಣ ಬ್ಯಾಕೋಡ್, ಅಂಜುಮನ್ ಸಂಸ್ಥೆಯ ಅಧ್ಯಕ್ಷ ಯೂಸುಫ್ ಸವಣೂರ, ಇಸ್ಲಾಂ ಧಾರ್ಮಿಕ ಗುರುಗಳು ಇದ್ದರು.