ನವದೆಹಲಿ : ದೇಶದಲ್ಲಿ ಕೊರೋನಾ ವೈರಸ್ ನ ಹೊಸ ರೂಪಾಂತರಿ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಮಧ್ಯಾಹ್ನ ಉನ್ನತ ಮಟ್ಟದ ಸಭೆ ಆಯೋಜಿಸಲಾಗಿದೆ. ಕೊರೋನಾ ಕಾರ್ಯ ಪಡೆಯ ಸದಸ್ಯರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಲ್ಲಿ ಮತ್ತೊಮ್ಮೆ ಹೊಸ ಮಾರ್ಗ ಸೂಚಿಕ್ರಮಗಳು ಜಾರಿಗೆ ಬರುವ ಸಾಧ್ಯತೆ ಹೆಚ್ಚಾಗಿದೆ.