Friday, November 22, 2024
ಸುದ್ದಿ

ಭಾರತದ ಮೊದಲ ಮಾನವಸಹಿತ ಗಗನಯಾನ 2024ರ ಅಂತ್ಯಕ್ಕೆ ಮುಂದೂಡಿಕೆ : ಇಸ್ರೋ

ಹೊಸದಿಲ್ಲಿ: ಭಾರತದ ಮಹತ್ವಾ ಕಾಂಕ್ಷೆಯ ಮೊದಲ ಮಾನವಸಹಿತ ಗಗನಯಾತ್ರೆ “ಗಗನಯಾನ’ ಯೋಜನೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ (ಇಸ್ರೋ) ಪುನಃ ಮುಂದೂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

2024ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ಉಡಾವಣೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ರಾಜ್ಯ ಸಚಿವ ಜಿತೇಂದ್ರ ಸಿಂಗ್‌ ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ.

ಈ ಯೋಜನೆಗೆ ಗಗನಯಾನಿಗಳನ್ನು ಗುರುತಿಸಲಾಗಿದ್ದು, ಅವರಿಗೆ ಬಾಹ್ಯಾಕಾಶ ಯೋಜನೆಗೆ ಸಂಬಂಧಿಸಿದ ನಿರ್ದಿಷ್ಟ ತರಬೇತಿಯನ್ನು ಬೆಂಗಳೂರಿನಲ್ಲಿ ನೀಡಲಾಗುತ್ತಿದೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಗಗನಯಾನಿಗಳ ಸುರಕ್ಷತೆಯ ಮಹತ್ವವನ್ನು ಗಮನದಲ್ಲಿ‌ಟ್ಟುಕೊಳ್ಳಲಾಗಿದೆ ಎಂದಿರುವ ಅವರು, ಈ ಕಾರಣಕ್ಕಾಗಿಯೇ ಮಾನವ ಸಹಿತ ಗಗನಯಾನಕ್ಕೂ ಮುನ್ನ ಎರಡು ಪರೀಕ್ಷಾ ವಾಹನಗಳ ಪ್ರಾತ್ಯಕ್ಷಿಕೆ ಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸಿಬ್ಬಂದಿ ರಹಿತ ‘ಗಗನಯಾನ 1’ ಯೋಜನೆ 2023ರ ಮೊದಲ ತ್ರೈಮಾಸಿಕದಲ್ಲಿ ಹಾಗೂ ಸಿಬ್ಬಂದಿ ರಹಿತ ‘ಗಗನಯಾನ 2’ ಯೋಜನೆಯನ್ನು 2024ರ ಎರಡನೇ ತ್ರೈಮಾಸಿಕದಲ್ಲಿ ಉಡಾವಣೆ ಮಾಡುವ ಗುರಿ ಹೊಂದಲಾಗಿದೆ. ಬಳಿಕ ಅಂತಿಮವಾಗಿ ಮಾನವ ಸಹಿತ ಬಾಹ್ಯಾಕಾಶ ಯಾನ ‘ಎಚ್‌1’ ಯೋಜನೆಯನ್ನು 2024ರ ನಾಲ್ಕನೇ ತ್ರೈಮಾಸಿಕದಲ್ಲಿ ಉಡಾವಣೆ ಮಾಡುವ ಯೋಜನೆಯಿದೆ ಎಂದು ಅವರು ತಿಳಿಸಿದ್ದಾರೆ.