Friday, January 24, 2025
ಸುದ್ದಿ

ಒಬ್ಬಂಟಿ ಮಹಿಳೆಯೋರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ – ಕಹಳೆ ನ್ಯೂಸ್

ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೋರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ದರೋಡೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ಗುರುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ನಡೆದಿರುವುದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರಾ ಎಂಬಾಕೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆಯಿಂದ ದರೋಡೆ ಮಾಡಲಾಗಿದೆ ಎಂಬ ದೂರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಓರ್ವ ಮುಸುಕು ಹಾಕಿದರೆ ಇನ್ನೋರ್ವ ವ್ಯಕ್ತಿ ಮಾಸ್ಕ್ ಹಾಕಿದ್ದ ವ್ಯಕ್ತಿಗಳು ದರೋಡೆ ಮಾಡಿದ್ದಾರೆ ಎಂದು ಪವಿತ್ರಾ ತಿಳಿಸಿದ್ದಾರೆ. ಮನೆಯೊಳಗೆ ನುಗ್ಗಿ ನಗದು ಹಣ ಹಾಗೂ ಅಡಿಕೆ ದರೋಡೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.