Thursday, January 23, 2025
ಸುದ್ದಿ

ನಾಸಲ್‌ ವ್ಯಾಕ್ಸಿನ್‌ ಗೆ ಕೇಂದ್ರದ ಅನುಮೋದನೆ; ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ – ಕಹಳೆ ನ್ಯೂಸ್

ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲೂ ಸಹ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಹಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಇದರ ಮಧ್ಯೆ ಮೂಗಿನ ಮೂಲಕ ನೀಡಲಾಗುವ ನಾಸಲ್‌ ವ್ಯಾಕ್ಸಿನ್‌ ಗೆ ಕೇಂದ್ರ ಸರ್ಕಾರ ಇಂದು ಅನುಮೋದನೆ ನೀಡಿದೆ.

ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಇಂದಿನಿಂದಲೇ ಇದು ಲಭ್ಯವಾಗಲಿದ್ದು, ಬಳಿಕ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಲಿದೆ. ಚುಚ್ಚುಮದ್ದಿಗೆ ಹೆದರುವವರಿಗೆ ನಾಸಲ್‌ ವ್ಯಾಕ್ಸಿನ್ ವರದಾನವಾಗಿದ್ದು, ಉಳಿದ ಲಸಿಕೆಗಳಷ್ಟೇ ಇದು ಪರಿಣಾಮಕಾರಿ ಎಂದು ಹೇಳಲಾಗಿದೆ