Wednesday, January 22, 2025
ಸುದ್ದಿ

BIG NEWS: ವಿಧಾನಪರಿಷತ್ ಉಪಸಭಾಪತಿಯಾಗಿ ಎಂ.ಕೆ. ಪ್ರಾಣೇಶ್ ಆಯ್ಕೆ – ಕಹಳೆ ನ್ಯೂಸ್

ಬೆಳಗಾವಿ: ವಿಧಾನಪರಿಷತ್ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಎಂ.ಕೆ. ಪ್ರಾಣೇಶ್ ಪರ 39 ಮತಗಳು ಚಲಾವಣೆಗೊಂಡಿದ್ದು, ಕಾಂಗ್ರೆಸ್ ನ ಅರವಿಂದ್ ಕುಮಾರ ಪರ 26 ಮತಗಳು ಬಂದಿವೆ. ಪರಿಷತ್ ಜೆಡಿಎಸ್ ಸದಸ್ಯರು ತಟಸ್ಥ ನಿಲುವು ಹೊಂದಿದ್ದರು.

ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ ಬೆನ್ನಲ್ಲೇ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಬಿಜೆಪಿಯಿಂದ ಪ್ರಾಣೇಶ್ ಹಾಗೂ ಕಾಂಗ್ರೆಸ್ ನಿಂದ ಅರವಿಂದ್ ಕುಮಾರ್ ನಾಮಪತ್ರ ಸಲ್ಲಿಸಿದ್ದರು. ಅಂತಿಮವಾಗಿ ಎಂ.ಕೆ. ಪ್ರಾಣೇಶ್ ಪರಿಷತ್ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.