Saturday, November 23, 2024
ಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ -ಕಹಳೆ ನ್ಯೂಸ್

ಪುತ್ತೂರು : ಭಾರತದ ಪ್ರಖ್ಯಾತ ಗಣಿತ ಶಾಸ್ತ್ರಜ್ಞರಾಗಿದ್ದ ಶ್ರೀನಿವಾಸ ರಾಮಾನುಜನ್ ರವರ ಜನ್ಮದಿನವಾದ ಡಿ.22ರನ್ನು 2012 ರಿಂದ “ರಾಷ್ಟ್ರೀಯ ಗಣಿತ ಶಾಸ್ತ್ರ ದಿನ”ವಾಗಿ ಆಚರಿಸಲಾಗುತ್ತಿದೆ. ಇದರ ಪ್ರಯುಕ್ತ ಸಂತ ಫಿಲೋಮಿನಾ ಕಾಲೇಜಿನ ಗಣಿತ ಶಾಸ್ತ್ರ ವಿಭಾಗವು ರಾಮಾನುಜನ್ ರವರ ವ್ಯಕ್ತಿತ್ವ ಹಾಗೂ ಸಾಧನೆಗಳ ಬಗ್ಗೆ ಉಪನ್ಯಾಸ, ವಿದ್ಯಾರ್ಥಿಗಳಿಗಾಗಿ ಸೆಮಿನಾರ್, ರಸಪ್ರಶ್ನೆ ಮುಂತಾದ ಸ್ಪರ್ಧೆಗಳನ್ನು ಆಯೋಜಿಸಿ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ಅತಿ ವಂ| ಲಾರೆನ್ಸ್ ಮಸ್ಕರೇಞಸ್‍ರವರು ವಿದ್ಯಾರ್ಥಿಗಳು ಗಣಿತದಲ್ಲಿ ಮಹತ್ವದ ಸಾಧನೆಯನ್ನು ಮಾಡುವಂತೆ ಪ್ರೇರೇಪಿಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟನಿ ಪ್ರಕಾಶ್ ಮೊಂತೆರೋ ರವರು ಈ ಸಂದರ್ಭದಲ್ಲಿ ಮಾತನಾಡಿ ಗಣಿತ ಕ್ಷೇತ್ರದ ದಿಗ್ಗಜರಾಗಿದ್ದ ಶ್ರೀನಿವಾಸ ರಾಮಾನುಜನ್‍ರ ಕೊಡುಗೆಗಳನ್ನು ಸ್ಮರಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪೆÇ್ರ| ಗಣೇಶ್ ಭಟ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ವಿಭಾಗದ ಉಪನ್ಯಾಸಕಿ ಸಮ್ರತಾ ಸ್ವಾಗತಿಸಿ ತನುಜಾ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ವಂ| ಸ್ಟ್ಯಾನಿ ಪಿಂಟೋರವರು ಹಾಗೂ ವಿಭಾಗದ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.