Wednesday, January 22, 2025
ಸುದ್ದಿ

ಶಾಲಾ ವಾಹನ ಢಿಕ್ಕಿ: ಗೂಡ್ಸ್ ರಿಕ್ಷಾ ಚಾಲಕ ಮೃತ್ಯು -ಕಹಳೆ ನ್ಯೂಸ್

ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನ ಚಾಲಕನೋರ್ವ ಮೃತಪಟ್ಟ ಘಟನೆ ಕೊಯ್ಯೂರು ಮಲೆಬೆಟ್ಟು ಸಮೀಪ ಶನಿವಾರ ನಡೆದಿರುವುದಾಗಿ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ (50) ಸಾವನ್ನಪ್ಪಿದವರು. ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಹನೀಫ್ (48), ಪಣಕಜೆ ನಿವಾಸಿ ಕೆ.ಮುಹಮ್ಮದ್(57) ಗಂಭೀರ ಗಾಯಗೊಂಡವರು ಎಂದು ತಿಳಿದುಬಂದಿದೆ.

ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಮುಖಾಮುಖಿಯಾಗಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಗೂಡ್ಸ್ ರಿಕ್ಷಾ ಸಂಪೂರ್ಣ ನುಜ್ಜು ಗುಜ್ಜಾಗಿದೆ.