Friday, November 22, 2024
ಸುದ್ದಿ

‘ಸದೃಢ ಭಾರತ ನಿರ್ಮಾಣಕ್ಕಾಗಿ ವ್ಯಕ್ತಿ ನಿರ್ಮಾಣ” ಧ್ಯೇಯದಡಿ ಶ್ರೀರಾಮ ವಿದ್ಯಾ ಕೇಂದ್ರದ, ಶ್ರೀರಾಮ ಪ್ರಥಮ ದರ್ಜೆ ಕಾಲೇಜು ಕಲ್ಲಡ್ಕ ಆಶ್ರಯದಲ್ಲಿ ಮೂರು ದಿನಗಳ ಆವಾಸೀಯ ಪ್ರೇರಣಾ ಶಿಬಿರ –ಕಹಳೆ ನ್ಯೂಸ್

” ಸದೃಢ ಭಾರತ ನಿರ್ಮಾಣಕ್ಕಾಗಿ ವ್ಯಕ್ತಿ ನಿರ್ಮಾಣ” ಎಂಬ ಧ್ಯೇಯದಡಿಯಲ್ಲಿ ಶ್ರೀರಾಮ ವಿದ್ಯಾ ಕೇಂದ್ರದ, ಶ್ರೀರಾಮ ಪ್ರಥಮ ದರ್ಜೆ ಕಾಲೇಜು ಕಲ್ಲಡ್ಕ ಇದರ ಆಶ್ರಯದಲ್ಲಿ ಮೂರು ದಿನಗಳ ಆವಾಸೀಯ ಪ್ರೇರಣಾ ಶಿಬಿರವನ್ನು ಹಮ್ಮಿಕೊಂಡಿದ್ದು ಇದರ ಉದ್ಘಾಟನಾ ಸಮಾರಂಭವು ಶ್ರೀರಾಮ ವಿದ್ಯಾಕೇಂದ್ರದ ವೇದವ್ಯಾಸ ಧಾನ್ಯಮಂದಿರದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ತಾಲೂಕಿನ ತಹಶೀಲ್ದಾರಾದ ಡಾ| ಸ್ಮಿತಾ ರಾಮುರವರು ದೀಪ ಪ್ರಜ್ವಲಿಸಿ , ಭಾರತಮಾತೆಗೆ ಪುಷ್ಪಾರ್ಚನೆಗೈಯವ ಮೂಲಕ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ , “ನಮಗೆ ಶಿಕ್ಷಣ ನೀಡಿದ ಗುರುಗಳನ್ನು ನಾವು ಪ್ರತಿಕ್ಷಣವೂ ನೆನಪಿಸಬೇಕು. ಶಿಕ್ಷಕರ ಆದರ್ಶಗುಣಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಶ್ರೀರಾಮ ವಿದ್ಯಾಸಂಸ್ಥೆ ನೀಡುತ್ತಿದೆ. ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಭವಿಷ್ಯದಲ್ಲಿ ಒಳ್ಳೆಯ ಶಿಕ್ಷಕರಾಗಲು ಭವಿಷ್ಶಿಬಿರ ಒಂದು ಉತ್ತಮ ವೇದಿಕೆ ಎಂದರೆ ತಪ್ಪಾಗಲಾರದು. ಯಾರ ನಿಂದನೆಗೂ ನಾವು ಒಳಗಾಗದೇ ಜೀವನದಲ್ಲಿ ದೊಡ್ಡ ಸಾಧನೆ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀವಸಂತ ಮಾಧವ ಶ್ರೀಮಾನ್ ಹಿಸಿದ್ದರು. ವೇದಿಕೆಯಲ್ಲಿ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಕೃಷ್ಣಪ್ರಸಾದ್ಶ್ರೀಮಾನ್ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಶ್ರೀಕೃಷ್ಣಪ್ರಸಾದ್ ಶ್ರೀಮಾನ್ ಸ್ವಾಗತಿಸಿದ್ರು. ಗಣಿತ ಶಾಸ್ತ್ರ ಉಪನ್ಯಾಸಕಿಯಾದ ಚಂದ್ರಕಲಾಮಾತಾಜಿ ವಂದಿಸಿ, ಅರ್ಥಶಾಸ್ತ್ರ ಉಪನ್ಯಾಸಕಿಯಾದ ಸಂಧ್ಯಾಮಾತಾಜಿ ನಿರೂಪಿಸಿದರು.