Wednesday, January 22, 2025
ಸುದ್ದಿ

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಮತ್ತು ಶ್ರೀರಾಮ ವಿದ್ಯಾಕೇಂದ್ರ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ತ್ರೋಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಕಲ್ಲಡ್ಕ : ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಮತ್ತು ಶ್ರೀರಾಮ ವಿದ್ಯಾಕೇಂದ್ರ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ತ್ರೋಬಾಲ್ ಪಂದ್ಯಾಟದ ಉದ್ಘಾಟನೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಕ್ರೀಡಾಳುಗಳ ಪಥಸಂಚಲನಕ್ಕೆ ಪರಮೇಶ್ವರ ಹೆಗಡೆ ಬೆಳಗಾವಿ ಅಧ್ಯಕ್ಷರು ವಿದ್ಯಾಭಾರತಿ ಕರ್ನಾಟಕ, ಪದ್ಮನಾಭ ಕೊಟ್ಟಾರಿ ಮಾಜಿ ಶಾಸಕರು, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಇವರು ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಕ್ರೀಡಾ ಸಚಿವರಾದ ಡಾ. ಕೆ.ಸಿ.ನಾರಾಯಣ ಗೌಡ ಇವರು ಮಾತನಾಡಿ, ದೇಶದಲ್ಲಿ ಇಂದು ಕ್ರೀಡೆಗೆ ಹೆಚ್ಚಿನ ಪೆÇ್ರೀತ್ಸಾಹ ಸಿಗುತ್ತಿದೆ. ಇಂದಿನ ಯುವ ಸಮೂಹ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನ್ಯಾಕ್ ಉಳಿಪಾಡಿಗುತ್ತು ಇವರು ಪಂದ್ಯಾಟವನ್ನು ಉದ್ಘಾಟಿಸಿ ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಮೇಶ್ವರ ಹೆಗಡೆ ಬೆಳಗಾವಿ ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ವಿದ್ಯಾಭಾರತಿ ದಕ್ಷಿಣ ಕ್ಷೇತ್ರ ಖೇಲ್ ಖೂದ್ ಪ್ರಮುಖರಾದ ಬಿ. ಡಿ. ಮಣಿ ಚೆನ್ನೈ, ಶ್ರೀಪತಿ ವಿದ್ಯಾಭಾರತಿಯ ಪ್ರಾಂತ ಉಪಾಧ್ಯಕ್ಷರು, ವಿದ್ಯಾಭಾರತಿಯ ದ.ಕ, ಜಿಲ್ಲಾ ಅಧ್ಯಕ್ಷರಾದ ಲೋಕಯ್ಯ ಡಿ. ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತವನ್ನು ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಪ್ರಾಂಶುಪಾಲರಾದ ವಸಂತ ಬಲ್ಲಾಳ್ ಧನ್ಯವಾದಗೈದು ಚೈತನ್ಯ ಪ್ರಕಾಶ್ ಮಾತಾಜಿ ಮತ್ತು ರಾಜೇಶ್ವರಿ ಮಾತಾಜಿ ಕಾರ್ಯಕ್ರಮವನ್ನು ನಿರ್ವಹಿಸಿದರು.