Recent Posts

Monday, January 20, 2025
ಸುದ್ದಿ

ಅಂತಾರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿಯಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಧನುಷ್ ರಾಮ್ ಗೆ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಪುತ್ತೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳು, ಕರ್ನಾಟಕ ಸರಕಾರ ಹಾಗೂ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿಯಲ್ಲಿ ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಧನುಷ್ ರಾಮ್ (ಶ್ರೀ ದಿನೇಶ್ ಪ್ರಸನ್ನ ಹಾಗೂ ಶ್ರೀಮತಿ ಉಮಾ.ಡಿ.ಪ್ರಸನ್ನ ದಂಪತಿ ಪುತ್ರ) ಸಾಂಸ್ಕೃತಿಕ ರಸಪ್ರಶ್ನೆಯಲ್ಲಿ ಭಾಗವಹಿಸಿದ್ದು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಗಳಿಸಿ, ತಾನು ಕಲಿಯುತ್ತಿರುವ ಶಿಕ್ಷಣ ಸಂಸ್ಥೆ ಹಾಗೂ ಕರ್ನಾಟಕ ಸ್ಕೌಟ್ಸ್ ಮತ್ತು ಗೈಡ್ಸ್ ನ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಪಸರಿಸುವ ಸಾಧನೆ ತೋರಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು