Monday, January 20, 2025
ಸುದ್ದಿ

ಉಡುಪಿ: ವಿದೇಶದಿಂದ ಬಂದ ವ್ಯಕ್ತಿಯಲ್ಲಿ ಕೊರೋನಾ ದೃಢ – ಕಹಳೆ ನ್ಯೂಸ್

ಉಡುಪಿ: ವಿದೇಶದಿಂದ ಉಡುಪಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಮಂಗಳೂರು ವಿಮಾನ ನಿಲ್ದಾಣ ದಲ್ಲಿ ನಡೆಸಲಾದ ಪರೀಕ್ಷೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಗಂಟಲು ದ್ರವನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಸೋಂಕು ಕಂಡು ಬಂದ ವ್ಯಕ್ತಿಯನ್ನು ಐಸೋಲೇಷನ್ ನಲ್ಲಿ ಇರಿಸಲಾಗಿದೆ.

ಬೆಂಗಳೂರು ಹೊರತುಪಡಿಸಿದರೆ ಅತೀ ಹೆಚ್ಚಿನ ವಿದೇಶಿ ಪ್ರವಾಸಿಗರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ

ಇದೇ ವೇಳೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಆಗಮಿಸಿದ್ದ 14 ಪ್ರಯಾಣಿಕರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.