Monday, January 20, 2025
ಸುದ್ದಿ

ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನಲ್ಲಿ ನಡೆದ ಕ್ರಿಯೇಟಿವ್‌ ಆವಿರ್ಭವ್‌ -2022 ರ ವಾರ್ಷಿಕೋತ್ಸವ –ಕಹಳೆ ನ್ಯೂಸ್

ಕಾರ್ಕಳ : ಗ್ರಾಮೀಣ ಪ್ರದೇಶದಲ್ಲಿ ಕ್ರಿಯೇಟಿವ್‌ನಂತಹ ವಿದ್ಯಾಸಂಸ್ಥೆಗಳು ಬಂದಲ್ಲಿ ಅಂತಹ ಪ್ರದೇಶ ಅಭಿವೃದ್ಧಿ ಹೊಂದುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಬದಲಾವಣೆಯಾಗುತ್ತದೆ, ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಗೆ ಮನ್ನಣೆ ದೊರೆತಂತೆ ಆಗುತ್ತದೆ ಎಂದು ಮಾನ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನೀಲ್‌ ಕುಮಾರ್‌ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನಲ್ಲಿ ನಡೆದ ಕ್ರಿಯೇಟಿವ್‌ ಆವಿರ್ಭವ್‌ -2022 ರ ವಾರ್ಷಿಕೋತ್ಸವದಲ್ಲಿ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ಉಚಿತ ಶಿಕ್ಷಣ ವ್ಯವಸ್ಥೆ ʼಕ್ರಿಯೇಟಿವ್‌ ಹೊಂಗಿರಣʼ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಡಾ. ನರೇಂದ್ರ ರೈ ದೇರ್ಲ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನ್ನಾಡುತ್ತಾ ಸಾಹಿತ್ಯದ ಮಾನವಿಕ ಅಂಶ ಪ್ರತಿ ವಿದ್ಯಾರ್ಥಿಯ ಗುರಿಯಾಗಬೇಕು. ಸಹಜ ಬದುಕು ಬದುಕಲು ಮಾನವನ ದುರಾಸೆ ಬಿಡುತ್ತಿಲ್ಲ ಮಾನವೀಯ ಮೌಲ್ಯಗಳೊಂದಿಗೆ ಜೀವಿಸಿ ಎಂದು ಕರೆ ನೀಡಿದರು. ವಿದ್ಯಾರ್ಥಿ ಜೀವನದಲ್ಲಿ ಕಲೆ ಸಾಹಿತ್ಯದೊಂದಿಗೆ ಒಡನಾಟ ಬೆಳೆಸಿಕೊಂಡು ಪರಿಸರ ಪ್ರೀತಿಯೊಂದಿಗೆ ಬದುಕಲು ಕಲಿಯೋಣ ಎಂದು ಆಶಿಸಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಹಿರ್ಗಾನ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಶ್ರೀ. ಸಂತೋಷ್‌ ಶೆಟ್ಟಿಯವರು ಪರಸ್ಪರ ಸಹಕಾರದ ಮೂಲಕ ಉತ್ತಮ ವಿದ್ಯಾಸಂಸ್ಥೆಯನ್ನು ಕಟ್ಟೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಳೆದ ವರ್ಷ ದ್ವಿತೀಯ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು ಹಾಗೂ 2022ನೇ ಇಸವಿಯಲ್ಲಿ ಪ್ರತಿಷ್ಠತ ಸಂಸ್ಥೆಗಳಲ್ಲಿ ಕಾಲೇಜಿನಲ್ಲಿ 16 ವೈದ್ಯಕೀಯ ಮತ್ತು ಇಂಜಿನಿಯರಿಂಗ್‌ ಗೆ ಪ್ರವೇಶ ಪಡೆದ 17 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಟ್ಲ್‌ ಬ್ಯಾಡ್ಮಿಂಡನ್‌ ನಲ್ಲಿ ಜಿಲ್ಲಾಮಟ್ಟದಿಂದ ರಾಜ್ಯ ತಂಡಕ್ಕೆ ಆಯ್ಕೆಯಾದ ಕ್ರೀಡಾ ಪ್ರತಿಭೆ ಕು.ಲೇಖನಾ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ನಿಹಾರ್‌ ಭಟ್‌ ಮತ್ತು ಸುಮಂತ್‌ ಶೆಟ್ಟಿ, ಹಾಸನದಲ್ಲಿ ನಡೆದ ಮೈಸೂರು ವಿಭಾಗಮಟ್ಟದ ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿ ಅಜಯ್‌ ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಬೆಳಿಗ್ಗೆ ಕುಂದಾಪುರದ ಅಂತರಾಷ್ಟ್ರೀಯ ಖ್ಯಾತಿಯ ಮೂರು ಮುತ್ತು ಕಲಾವಿದರಿಂದ ಹಾಸ್ಯಮಯ ನಗೆನಾಟಕ ನಡೆಯಿತು. ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಸಂಸ್ಥೆಯ ವಾರ್ಷಿಕ ವರದಿ ವಾಚಿಸಿದರು. ಸಂಸ್ಥಾಪಕರಲ್ಲೊಬ್ಬರಾದ ಅಶ್ವತ್ ಎಸ್.ಎಲ್‌ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಗಣಪತಿ ಭಟ್‌ ಕೆ.ಎಸ್‌ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಆದರ್ಶ ಎಂ.ಕೆ, ವಿಮಲ್‌ರಾಜ್‌. ಜಿ, ಅಮೃತ್‌ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಲೋಹಿತ್‌ ಎಸ್‌.ಕೆ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ನಿರ್ವಹಿಸಿದರು. ರಾಮಕೃಷ್ಣ ಹೆಗಡೆ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕ ಸತೀಶ್‌ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸಭಾಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ʼಕಲಾಸಿಂಧುʼ ವೇದಿಕೆಯಲ್ಲಿ ʼಭಾರತ ವೈಭವʼ ಪರಿಕಲ್ಪನೆಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.