Sunday, January 19, 2025
ಕಾಸರಗೋಡುಕ್ರೈಮ್ಸುದ್ದಿ

ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ; ನಿಷೇಧಿತ PFI ನಾಯಕರಿಗೆ ಸಂಬಂಧಿಸಿದ ಕೇರಳದ 56 ಕಡೆ NIA ದಾಳಿ – ಕಹಳೆ ನ್ಯೂಸ್ 

ತಿರುವನಂತಪುರಂ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ನಾಯಕರು ಹಾಗೂ ಕಾರ್ಯಕರ್ತರಿಗೆ ಸಂಬಂಧಿಸಿದ ಕೇರಳದ (Kerala) 56 ಕಡೆಗಳಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಳಿ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳದ ಹಲವಾರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ಆಲಪ್ಪುಳ ಹಾಗೂ ಮಲಪ್ಪುರಂನಲ್ಲಿ ಎನ್‌ಐಎ ರೇಡ್ ನಡೆಸಿದೆ. ಎರ್ನಾಕುಲಂನಲ್ಲಿ 8 ಕಡೆ, ಅಲಪ್ಪುಳ ಹಾಗೂ ಮಲಪ್ಪುರಂನಲ್ಲಿ 4 ಕಡೆ ಹಾಗೂ ತಿರುವನಂತಪುರಂನಲ್ಲಿ 3 ಕಡೆ ಏಜೆನ್ಸಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಎನ್‌ಐಎ ಇತ್ತೀಚೆಗೆ ಕೇರಳದ ನ್ಯಾಯಾಲಯಕ್ಕೆ ವರದಿಯೊಂದನ್ನು ಸಲ್ಲಿಸಿದೆ. ಪಿಎಫ್‌ಐನ ಹಿರಿಯ ಸದಸ್ಯರು ವಿವಿಧ ಮಾಧ್ಯಮಗಳ ಮೂಲಕ ಅಲ್ ಖೈದಾದೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ರಹಸ್ಯ ಶಾಖೆಗಳನ್ನೂ ನಡೆಸುತ್ತಿದ್ದಾರೆ ಎಂದು ಆರೋಪಿಸಿದೆ. 

ಈ ಹಿಂದಿನ ಕಾರ್ಯಾಚರಣೆಗಳಲ್ಲಿ ಎನ್‌ಐಎ ಕೆಲ ಸಾಧನಗಳನ್ನು ವಶಪಡಿಸಿಕೊಂಡಿತ್ತು. ಈ ಸಾಧನಗಳನ್ನು ಪರೀಕ್ಷೆಗೊಳಪಡಿಸಿದಾಗ ಇವು ಪಿಎಫ್‌ಐನ ಹಿರಿಯ ಸದಸ್ಯರು ಅಲ್ ಖೈದಾ ಸದಸ್ಯರೊಂದಿಗೆ ಸಂವಹನ ನಡೆಸುವ ವಿಚಾರಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದೆ.

ಕೆಲ ತಿಂಗಳ ಹಿಂದೆ ಕಟ್ಟುನಿಟ್ಟಾದ ಭಯೋತ್ಪಾದನೆ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ ಅಡಿಯಲ್ಲಿ, ಕೇಂದ್ರ ಸರ್ಕಾರ ಪಿಎಫ್‌ಐ ಅನ್ನು ನಿಷೇಧಿಸಿದೆ. ಐಎಸ್‌ನಂತಹ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಇದು ಸಂಪರ್ಕ ಹೊಂದಿರುವುದಾಗಿ ಆರೋಪ ಮಾಡಲಾಗಿತ್ತು.