Recent Posts

Monday, January 20, 2025
ಸುದ್ದಿ

ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಕಾರು ಭೀಕರ ರಸ್ತೆ ಅಪಘಾತ : ಸ್ಥಿತಿ ಗಂಭೀರ – ಕಹಳೆ ನ್ಯೂಸ್

ರೂರ್ಕಿ: ಉತ್ತರಖಂಡದ ರೂರ್ಕಿ ಬಳಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ರಿಕೆಟಿಗ ದೆಹಲಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಹಮ್ಮದ್ಪುರ್ ಝಾಲ್ ಬಳಿ ಈ ಅಪಘಾತ ಸಂಭವಿಸಿದೆ. ವೈದ್ಯರ ಪ್ರಕಾರ, ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ.

ಮಾಹಿತಿ ಪಡೆದ ನಂತರ, ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನ ಕಿಶೋರ್ ಸಿಂಗ್ ಸ್ಥಳಕ್ಕೆ ತಲುಪಿದ್ದಾರೆ. ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಸುಶೀಲ್ ನಗರ್, ಪ್ರಸ್ತುತ ರಿಷಭ್ ಅವರ ಸ್ಥಿತಿ ಸ್ಥಿರವಾಗಿದೆ, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಭ್ ಅವರ ಕಾರು ರೈಲಿಂಗ್ ಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ. ಬಹಳ ಕಷ್ಟಪಟ್ಟು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಅದೇ ಸಮಯದಲ್ಲಿ, ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್ ಅವರನ್ನು ದೆಹಲಿ ರಸ್ತೆಯ ಸಕ್ಷಮ್ ಆಸ್ಪತ್ರೆಗೆ ಕರೆದೊಯ್ಯಲಾಯಿತು