Recent Posts

Monday, January 20, 2025
ಸುದ್ದಿ

ರಾಜ್ಯದ ಜನತೆಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ: ವಿದ್ಯುತ್ ದರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿವೆ. ಜನರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ರಾಜ್ಯ ಬಿಜೆಪಿ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇಂಧನ ದರ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಬಂಧ ಟ್ವೀಟ್ ಮಾಡಿರುವ ಇಂಧನ ಸಚಿವ ಸುನೀಲ್ ಕುಮಾರ್, ಬೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಹೇಳಿದ್ದಾರೆ.

ಅಗತ್ಯ ವಸ್ತುಗಳು, ಇಂಧನ ದರ ಸೇರಿದಂತೆ ಎಲ್ಲಾ ವಸ್ತುಗಳ ಮೇಲೆ ಬೆಲೆ ಹೆಚ್ಚಳ ಮಾಡಲಾಗಿತ್ತು. ಇದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆ ಜನರನ್ನು ತನ್ನತ್ತ ಸೆಳೆಯಲು ಬಿಜೆಪಿ ಸರ್ಕಾರ ಮುಂದಾಗಿದೆ. ಹೀಗಾಗಿ ಇದೀಗ ಬೆಸ್ಕಾಂ ಹಾಗೂ ಮೆಸ್ಕಾ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಕಡಿತ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.