Monday, January 20, 2025
ಸುದ್ದಿ

ಉಳ್ಳಾಲ : ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಬಾಲಕ ನಿಧನ – ಕಹಳೆ ನ್ಯೂಸ್

ಉಳ್ಳಾಲ ಡಿಸೆಂಬರ್ 30 : ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಮೃತ ಬಾಲಕನಾಗಿದ್ದು ಈತ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ ಜ್ವರ, ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ ,ಕುಟುಂಬ ಹಾಗೂ ಸ್ಥಳೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಎರಡು ವರ್ಷಗಳ ಹಿಂದೆ ಅಶ್ವಿತ್ ನ ತಂದೆ ಅವಘಡವೊಂದರಲ್ಲಿ ಸಾವನ್ನಪ್ಪಿದ್ದರು.ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್ ತಾಯಿಯೊಂದಿಗೆ ವಾಸವಿದ್ದ. ಅಶ್ವಿತ್ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು ಶಿಕ್ಷಕರ ಪ್ರೀತಿ ಪಾತ್ರನಾಗಿದ್ದ. ಮೃತ ಅಶ್ವಿತ್ ಗೆ ಕೊನೆಯ ಕ್ಷಣದಲ್ಲಿ ಮಿದುಳು ಜ್ವರದ ಲಕ್ಷಣ ಇತ್ತೆಂದು ಹೇಳಲಾಗಿದೆ. ಆತನಿಗೆ ಮಿದುಳು ಜ್ವರದ ವ್ಯಾಕ್ಸಿನೇಷನ್‌ ಆಗಿದೆಯೇ ಎಂದು ಇನ್ನೂ ಧೃಡಪಟ್ಟಿಲ್ಲ. ಈ ಬಗ್ಗೆ ತಜ್ಞ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ.