Tuesday, January 21, 2025
ಸುದ್ದಿ

ದೆಹಲಿ ಗಣರಾಜ್ಯೋತ್ಸವ ಪರೇಡ್‌ನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿವೇಕಾನಂದ ಮಹಾವಿದ್ಯಾಲಯದ ದೇವಿಕಾ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಪ್ರಯಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ರಾಷ್ಟ್ರೀಯ ತಂಡಕ್ಕೆ ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಪ್ರಥಮ ಬಿ ಕಾಂ ವಿದ್ಯಾರ್ಥಿನಿ, ಎನ್‌ಸಿಸಿ ಜೂನಿಯರ್ ಅಂಡರ್ ಆಫೀಸರ್ ದೇವಿಕಾ ಆಯ್ಕೆಯಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಅಕ್ಟೋಬರ್ ತಿಂಗಳಿನಿAದ ಡಿಸೆಂಬರ್ ವರೆಗೆ ರಾಜ್ಯದ ವಿವಿಧೆಡೆ ನಡೆದ ಆರು ಪೂರ್ವಸಿದ್ಧತಾ ಸುತ್ತನ್ನು ಯಶಸ್ವಿಯಾಗಿ ಪೂರೈಸಿರುತ್ತಾರೆ. ಇವರು ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ನ ಮಡಿಕೇರಿ ಬೆಟಾಲಿಯನ್ ನ ಪ್ರತಿನಿಧಿಯಾಗಿ ಪ್ರಧಾನಮಂತ್ರಿ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಭಾಗಿಯಾಗುವ ದೆಹಲಿಯ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಇವರು ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಉದಯಶಂಕರ್ ಕುರಿಯಾಜೆ ಮತ್ತು ವಸಂತಲಕ್ಷ್ಮಿ ದಂಪತಿಗಳ ಪುತ್ರಿ.
ಇವರಿಗೆ ವಿವೇಕಾನಂದ ಪದವಿ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಭಾಮಿ ಅತುಲ್ ಶೆಣೈ ಅವರು ಮಾರ್ಗದರ್ಶನವನ್ನು ನೀಡಿದ್ದಾರೆ.