Wednesday, January 22, 2025
ಸುದ್ದಿ

ಜ.3ರಂದು ಮಂಗಳೂರಿನಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನ 2023 –ಕಹಳೆ ನ್ಯೂಸ್

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಿ. ವತಿಯಿಂದ ಪತ್ರಕರ್ತರ ಜಿಲ್ಲಾ ಸಮ್ಮೇಳನ 2023 ಇದೇ ಬರುವ ಜ.3ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಈ ಬಗ್ಗೆ ಮಂಗಳೂರು ಪ್ರಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಾಹಿತಿ ನೀಡಿದ್ರು. ಕಾರ್ಯಕ್ರಮವನ್ನು ಎಂಆರ್‍ಜಿ ಗ್ರೂಪ್‍ನ ಅಧ್ಯಕ್ಷರಾದ ಕೆ ಪ್ರಕಾಶ್ ಶೆಟ್ಟಿ ದೀಪ ಬೆಳಗುವ ಮೂಲಕ ಉದ್ಗಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ ಸದಾಶಿವ ಶೆಣೈ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಆಶಯ ಭಾಷಣ ಮಾಡಲಿದ್ದಾರೆ. ಬೀಚ್ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಪತ್ರಕರ್ತರ ಕ್ಷೇಮನಿಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂಎನ್ ರಾಜೇಂದ್ರ ಕುಮಾರ್ ಪರಿಸರ ಯೋಜನೆಗೆ ಚಾಲನೆ ನೀಡಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂಎನ್ ಮೋಹನ್ ಆಳ್ವ ಮನೋಹರ್ ಪ್ರಸಾದ್ ಅವರ ಭಾವ ಚಿತ್ರ ಯಾನ 2 ಕೃತಿ ಬಿಡುಗಡೆ ಮಾಡಲಿದ್ದಾರೆ. ವಿಸೆಷ ಸಂಚಿಕೆ ಮಾಧ್ಯಮವನ್ನು ಕರ್ನಾಟಕ ಕರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಡಗೂರು ಬಿಡುಗಡೆ ಮಾಡಲಿದ್ದಾರೆ. ಜಾಗತಿಕ ಬಮಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಪತ್ರಕರ್ತರ ವಿಕ್ರಂ ಕಾಂತಿಕೆರೆ ಕೃತಿ ಕಾವೇರಿ ತೀರದ ಪ್ರಯಣ ವನ್ನು ಬಿಡುಗಡೆ ಮಾಡಲಿದ್ದು, ಶಾಸಕ ವೇದವ್ಯಾಸ್ ಕಾಮತ್ ಕಿಟ್ ವಿತರಣೆ ಮಾಡಲಿದ್ದಾರೆ. ಶಾಸಕ ಭರತ್ ಶೆಟ್ಟಿ ಹಸಿರು ಉಸಿರು ಹಣ್ಣಿನ ಗಿಡಗಳನ್ನು ವಿತರಣೆ ಮಾಡಲಿದ್ದಾರೆ.

ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆಯನ್ನು ಶಾಸಕ ಯುಟಿ ಕಾದರ್‍ಮಾಡಲಿದ್ದು, ವಿಧಾನ ಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ ವೆನ್ಲಾಕ್ ಆಸ್ಪತ್ರೆಯ ವಾಚನಾಲಯಕ್ಕೆ ಪುಸ್ತಕ ಹಸ್ತಾಂತರ ಮಾಡಲಿದ್ದಾರೆ. ಇನ್ನು ಶಾಸಕ ಹರೀಶ್ ಪೂಂಜಾ ಬಿಜೈ ಕಾಪಿಕಾಡ್ ಅಂಗನವಾಡಿ ಮಕ್ಕಳಿಗೆ ಕ್ರೀಡ ಪರಿಕರಗಳ ವಿತರಣೆ ಮಾಡಲಿದ್ದು, ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಪಟ್ಲ ಫೌಂಡೇಶನ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಚಾಲನೆ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸಮನಪಾ ಮೇಯರ್ ಜಯಾನಂದ್ ಅಂಚನ್, ಉಪಮೇಯರ್ ಪೂರ್ಣಿಮಾ, ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿವಿ ಮಲ್ಲಿಕಾರ್ಜುನಯ್ಯ, ಕ್ರೆಡೈ ಅಧ್ಯಕ್ಷ ಪುಷ್ಪರಾಜ್ ಜೈನ್, ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಪಿಎಸ್ ಯಡಪಡಿತ್ತಾಯ, ಕೆನರಾ ಬ್ಯಾಂಕ್‍ ನ ಮಹಾಪ್ರಬಂದಕ ಯೋಗೀಶ್ ಆಚಾರ್ಯ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ ಅಧ್ಯಕ್ಷ ಸುಚರಿತ ಶೆಟ್ಟಿ, ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ಮುಖ್ಯಸ್ಥ ಗಾಯತ್ರಿ ಆರ್ ಮುಖ್ಯ ಅತಿಥಿಗಲಾಗಿ ಭಾಗವಹಿಸಲಿದ್ದಾರೆ.

ಇನ್ನು ಬೆಳಗ್ಗೆ 11.30ರಿಂದ 1ಗಂಟೆಯವರೆಗೆ ವಿಚಾರಗೋಷ್ಟಿ ನಡೆಯಲಿದ್ದು, ಸಮನ್ವಯಕಾರರಾಗಿ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ವಿಷಯ ಮಂಡನೆಗೆ ಹಿರಿಯ ಪತ್ರಕರ್ತ ಅನಿಲ್ ಶಾಸ್ತ್ರಿ, ಮುಖ್ಯ ಅತಿಥಿಯಾಗಿ ಓಶಿಯನ್ ಪರ್ಲ್ ಉಪಾಧ್ಯಕ್ಷ ಗಿರೀಶ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಗಂಟೆಯಿಂದ 2.30ರವರೆಗೆ ರಾಜೇಶ್ ಮಳಿ ಹಾಗೂ ಶುಭ ರಾಜೇಶ್ ಮಳಿ ಬಳಗದವರಿಂದ ಮ್ಯಾಜಿಕ್ ಶೋ ನಡೆಯಲಿದೆ.

ಮಧ್ಯಾಹ್ನ 2.30ರಿಂದ 3.30ರವರೆಗೆ ವಿವಿಧ ತಾಲೂಕು ಪತ್ರಕರ್ತರ ಸಂಘಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮಧ್ಯಾಹ್ನ 3.30ರಿಂದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ಪತ್ರಕರ್ತರಿಗೆ ಸನ್ಮಾನ ಹಾಗೂ ತಾಲೂಕು ಪತ್ರಕರ್ತರ ಸಂಗದ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಹಾಗೂ ಎಸ್ ಅಂಗಾರ ಸನ್ಮಾನಿಸಲಿದ್ದಾರೆ. ಸಮಾರೋಪ ಬಾಷಣವನ್ನು ವಿಧಾನ ಪರಿಷತ್‍ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಉಪಾನಾಥ್ ಕೋಡ್ತಾನ್, ವಿಧಾನ ಪರಿಷತ್ ಸದಸ್ಯರಾದ ಕೆ ಹರೀಶ್ ಕುಮಾರ್, ಎಸ್ ಎಲ್ ಭೋಜೇ ಗೌಡ, ಬಿಎಂ ಫಾರೂಕ್, ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ಭಾಗವಹಿಸಲಿದ್ದಾರೆ.

ಗೌರವ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಎಂ ಆರ್ ರವಿ ಕುಮಾರ್, ಮುಖ್ಯ ಕಾರ್ಯನಿರ್ವಹನಾಧಿಕಾರಿ ಡಾ. ಕುಮಾರ್, ಪಶ್ಚಿಮ ವಲಯ ಡಿಐಜಿ ಚಂದ್ರಗುಪ್ತ, ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಎಸ್ಪಿ ಸೋನಾವಣೆ ಋಷಿಕೇಷ್ ಭಗವಾನ್, ಸಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಉಪ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್, ಎಸ್ಪಿ ಲೋಕಾಯುಕ್ತ ಲಕ್ಷ್ಮೀ ಗಣೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಹೆಚ್‍ಜಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟ್ ಅಧ್ಯಕ್ಷ ಸಾಂತಾರಾಮ ಶೆಟ್ಟಿ, ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬ0ಟ್ವಾಳ್ ಭಾಗವಹಿಸಲಿದ್ದಾರೆ.