Thursday, January 23, 2025
ಸುದ್ದಿ

ಮಂಗಳೂರು: ರಜೆಯಲ್ಲಿ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ನಿಧನ –ಕಹಳೆ ನ್ಯೂಸ್

ಮಂಗಳೂರು: ಬಿಎಸ್‌ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಜ. 1 ರಂದು ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ 21 ವರ್ಷಗಳಿಂದ ಅವರು ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 142 ನೇ ಬಟಾಲಿಯನ್ ಒರಿಸ್ಸಾದಲ್ಲಿ ಕರ್ತವ್ಯದಲ್ಲಿದ್ದು, ರಜೆಗಾಗಿ ಊರಿಗೆ ಬಂದಿದ್ದ ಸಮಯ ನಿನ್ನೆ (ಡಿ. 31) ಹೃದಯಾಘಾತವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜ.1ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, 6 ವರ್ಷದ ಪುತ್ರ ಹಾಗೂ ಒಂದುವರೆ ವರ್ಷದ ಪುತ್ರಿಯನ್ನು ಅಗಲಿದ್ದಾರೆ.