Monday, January 27, 2025
ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಆತಿಥ್ಯದಲ್ಲಿ ಅಖಿಲ ಭಾರತ ಅಂತರ್-ವಿಶ್ವ ವಿದ್ಯಾನಿಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ –ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಆತಿಥ್ಯದಲ್ಲಿ ಅಖಿಲ ಭಾರತ ಅಂತರ್-ವಿಶ್ವ ವಿದ್ಯಾನಿಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಅಂಗವಾಗಿ ಪತ್ರಿಕಾ ಗೋಷ್ಠಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯಲ್ಲಿ ನಡೆಯಿತು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜು ಮತ್ತು ಊರಿನ ಜನತೆಗೆ ಇದೊಂದು ಸುಂದರ ಹಬ್ಬ ಕಾರ್ಯಕ್ರಮದ ಯಶಸ್ಸಿಗಾಗಿ ಸಮಿತಿ ಗಳ ರಚನೆಯಾಗಿ ಜವಾಬ್ದಾರಿಗಳ ಹಂಚಿಕೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಕ್ರೀಡಾಪಟುಗಳ ವಸತಿಗಾಗಿ ವಸತಿಗೃಹಗಳ ಮತ್ತು ಖಾಸಾಗಿ ವಿದ್ಯಾಸಂಸ್ಥೆಗಳ ಸಹಭಾಗಿತ್ವವನ್ನು ಕೇಳಲಾಗಿದೆ.ಸ್ಥಳೀಯ ಸಂಘ ಸಂಸ್ಥೆಗಳು ಕೂಡಾ ಈ ಅರ್ಥಪೂರ್ಣ ಕಾರ್ಯಕ್ಕೆ ಕೈಜೋಡಿಸುವಂತೆ ಮಾನ್ಯ ಶಾಸಕರು ಮತ್ತು ಕಾಲೇಜು ಅಭಿವೃಧ್ದಿ ಸಮಿತಿಯ ಅಧ್ಯಕ್ಷರಾದ ಶ್ರೀ ಸಂಜೀವ ಮಟಂದೂರುರವರು ವಿನಂತಿಸಿದರು.ಈ ಸಂದರ್ಭದಲ್ಲಿ ಉಪ್ಪಿನಂಗಡಿ ಪಂಚಾಯತ್ ಅಧ್ಯಕ್ಷೆ ಉಷಾಚಂದ್ರ ಮುಳಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರವೀಣ್, ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಸುಬ್ಬಪ್ಪ ಕೈಕಂಬ, ಸುನಿಲ್ ದಡ್ಡು,ಕಾಲೇಜು ಅಭಿವೃಧ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು