Monday, November 25, 2024
ಸುದ್ದಿ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ನು ಮುಂದೆ 1 ಕೆ.ಜಿ ಹೆಚ್ಚುವರಿ ಅಕ್ಕಿ ವಿತರಣೆ –ಕಹಳೆ ನ್ಯೂಸ್

ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿAದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಬAಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊAಡ ಹಿನ್ನಲೆಯಲ್ಲಿ, ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಉದ್ದೇಶಿಸಿದೆ.

ಈ ಹಿನ್ನಲೆಯಲ್ಲಿ ಜನವರಿ 2023ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಹಾರ ಇಲಾಖೆಯ ಈ ಆದೇಶದ ಹಿನ್ನಲೆಯಲ್ಲಿ, ಈ ತಿಂಗಳಿನಿAದಲೇ ಪಡಿತರ ಚೀಟಿದಾರರ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಣೆ ಆರಂಭವಾಗಲಿದೆ.