Wednesday, January 22, 2025
ಸುದ್ದಿ

ಓಜಾಲ ವಾಸುಕಿ ಸ್ಪೋರ್ಟ್ಸ್ ಕ್ಲಬ್ ತಂಡದ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಮಿಥುನ್ ಓಜಾಲ, ಉಪಾಧ್ಯಕ್ಷರಾಗಿ ಕಿರಣ್ ಮಂಜಗುತ್ತು – ಕಹಳೆ ನ್ಯೂಸ್

ಹಲವು ಸಮಾಜಮುಖಿ ಕಾರ್ಯ ಹಾಗೂ ಕ್ರೀಡಾ ಚಟುವಟಿಕೆಗಳನ್ನ ನಿರಂತರವಾಗಿ ಮುನ್ನಡೆಸಿಕೊಂಡು ಬರುತ್ತಿರುವ ಓಜಾಲದ ವಾಸುಕಿ ಸ್ಪೋರ್ಟ್ಸ್ ಕ್ಲಬ್ ತಂಡದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಕಬ್ಬಡಿ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯದಲ್ಲಿ ಹೆಸರು ಮಾಡಿದ ವಾಸುಕಿ ಸ್ಪೋರ್ಟ್ಸ್ ಕ್ಲಬ್ ಜನ ಮೆಚ್ಚುಗೆಗೆ ಪಾತ್ರವಾಗಿದೆ. ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆಯಲ್ಲಿ ನೂತನ ಅಧ್ಯಕ್ಷರಾಗಿ ಮಿಥುನ್ ಓಜಾಲ, ಉಪಾಧ್ಯಕ್ಷರಾಗಿ ಕಿರಣ್ ಮಂಜಗುತ್ತು, ಕಾರ್ಯದರ್ಶಿಯಾಗಿ ವಿಕ್ರಮ್ ಓಜಾಲ ಹಾಗೂ ಕೋಶಾಧಿಕಾರಿಯಾಗಿ ವಸಂತ ಪಾಂಡೇಲು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಸ್ಪೋರ್ಟ್ಸ್ ಕ್ಲಬ್‌ನ ಗೌರವಧ್ಯಕ್ಷರಾದ ಸೋಮಶೇಖರ ಪೂಜಾರಿ, ಮಾಜಿ ಅಧ್ಯಕ್ಷರಾದ ಮುರಳೀಧರ ಕೋರ್ಜೆ ಹಾಗೂ ರಾಕೇಶ್ ಓಜಾಲ ಸೇರಿದಂತೆ ಕ್ಲಬ್‌ನ ಸದಸ್ಯರು ಹಾಗೂ ಅನೇಕರು ಉಪಸ್ಥಿತರಿದ್ದರು.

ವಾಸುಕಿ ಸ್ಪೋರ್ಟ್ಸ್ ಕ್ಲಬ್ ಹಿಂದೆ ಸಮಾಜದ ಹಿತದೃಷ್ಟಿಯಿಂದ ಹಲವಾರು ಕಾರ್ಯಕ್ರಮಗಳನ್ನ ಆಯೋಜಿಸಿ ಯಶಸ್ವಿಯಾಗಿದೆ. ಇನ್ನು ಮುಂದೆ ನೂತನ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಹಾಗೂ ಹಿರಿಯ ಮಾರ್ಗದರ್ಶನ, ಊರಿನ ಜನರ ಸಹಕಾರದ ಮೂಲಕ ಯುವಕರ ತಂಡ ಉತ್ತಮ ಕಾರ್ಯ ನಿರ್ವಹಿಸಿ, ಹೆಚ್ಚಿನ ಕೆಲಸ ಕಾರ್ಯಗಳನ್ನ ಮಾಡಲಿದೆ.