Wednesday, January 22, 2025
ಸುದ್ದಿ

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ – ಕಹಳೆ ನ್ಯೂಸ್

ಈಡಿಗ, ಬಿಲ್ಲವ, ನಾಮದಾರಿ ಸಹಿತ 26 ಉಪ ಪಂಗಡಗಳ ಶ್ರೇಯೋಭಿವೃದ್ಧಿಗಾಗಿ ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಪ್ರತ್ಯೇಕ ಕೋಶ ಹಾಗೂ ಸಪರೇಟ್ ಕಾರ್ಪಸ್ ಫಂಡ್ ಮೂಲಕ ಸ್ಥಾಪಿಸಲಾದ ‘ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶ’ವನ್ನು ಪರಿವರ್ತಿಸಿ ಪ್ರಸಕ್ತ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನಾಗಿ ಘೋಷಿಸಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದುಳಿದ ವರ್ಗಗಳಿಗೆ ಸೇರಿದ ಸದ್ರಿ ಸಮುದಾಯಗಳ ಹಲವಾರು ವರ್ಷಗಳ ಬೇಡಿಕೆಯನ್ನು ಪರಿಗಣಿಸಿ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ವನ್ನು ಘೋಷಿಸುವ ಜೊತೆಗೆ ಮುಂದಿನ ಬಜೆಟ್ ನಲ್ಲಿ ಸೂಕ್ತ ಅನುದಾನವನ್ನು ಘೋಷಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.