Wednesday, January 22, 2025
ಸುದ್ದಿ

ಅಯ್ಯೋ ಮನೆಯ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪ ಮರ‍್ರೆ..! – ಕಹಳೆ ನ್ಯೂಸ್

ಬೆಳ್ತಂಗಡಿ : ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹತ್ಯಡ್ಕ ನಿವಾಸಿ ಉಮೇಶ್ ಎಂಬವರ ಮನೆಯ ರೂಂ ನ ಟೇಬಲ್ ಫ್ಯಾನ್ ಪಕ್ಕದಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮಲಗಿತ್ತು. ಗಾಬರಿಗೊಂಡ ಮನೆಯವರು ತಕ್ಷಣ ಸ್ಥಳೀಯ ಉರಗ ತಜ್ಞರಾದ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಉಮೇಶ್ ಮನೆಗೆ ಆಗಮಿಸಿದ ಸ್ನೇಕ್ ಅಶೋಕ್ ಲಾಯಿಲ ಅವರು ಕಾಳಿಂಗವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.