Recent Posts

Sunday, January 19, 2025
ಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಹೆತ್ತವರ ಸಭೆ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚು ಆಸಕ್ತಿ ವಹಿಸಿ ಸಾಧನೆ ಮಾಡುವಲ್ಲಿ ಉಪನ್ಯಾಸಕರ ಜೊತೆಗೆ ಪೋಷಕರ ಪಾತ್ರವೂ ಮಹತ್ತರವಾದುದು. ಪೋಷಕರು ನಿರಂತರವಾಗಿ ಉಪನ್ಯಾಸಕರು ಹಾಗೂ ಕಾಲೇಜಿನ ಸಂಪರ್ಕ ಹೊಂದಿದಲ್ಲಿ ವಿದ್ಯಾರ್ಥಿಗಳ ಪ್ರತಿಯೊಂದು ಚಟುವಟಿಕೆಗಳ ವಿವರ ದೊರೆತು ಅವರು ಸಮರ್ಪಕ ದಾರಿಯಲ್ಲಿ ನಡೆಯುವಂತೆ ಮಾಡಲು ಅನುಕೂಲವಾಗುತ್ತದೆ. ವಿಚಾರ ವಿನಿಮಯ ನಡೆದಾಗ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಂಬಿಕಾ ಸಮೂಹ ವಿದ್ಯಾ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ ಹೆತ್ತವರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಶಿಸ್ತಿನಿಂದ ಬದುಕುವಂತೆ ಮಾಡಲು ವಿದ್ಯಾಲಯದಲ್ಲಿ ಹಲವು ನಿಬಂಧನೆಗಳನ್ನು ರೂಪಿಸಲಾಗುತ್ತದೆ. ಇವುಗಳು ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗುತ್ತವೆ. ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚು ಆದ್ಯತೆ ದೊರಕಿದಾಗ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ. ಜೀವನ ಪಾಠವನ್ನು ವಿದ್ಯಾರ್ಥಿಗಳಿಗೆ ಕಲಿಸುವ ಕಾರ್ಯ ಶಿಕ್ಷಣ ಸಂಸ್ಥೆಯ ಆದ್ಯತೆಯಾದಾಗ ರಾಷ್ಟ್ರ ನಿರ್ಮಾಣ ಕಾರ್ಯಕ್ಕೂ ಅದು ಸಹಕಾರಿ ಎನಿಸುತ್ತದೆ ಎಂದು ಹೇಳಿದರು.

ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಉದ್ಯಮಿ ಆನಂದ್ ಭಟ್ ಮಾತನಾಡಿ, ಉಪನ್ಯಾಸಕರ ಜೊತೆಗೆ ಪೋಷಕರು ವಿದ್ಯಾಸಂಸ್ಥೆಯ ಅಭಿವೃದ್ಧಿಗೆ ಬೇಕಾದ ವಿಚಾರಗಳನ್ನು ಚರ್ಚಿಸಭೇಕಾದದ್ದು ಅಗತ್ಯ. ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಉಪನ್ಯಾಸಕರಷ್ಟೇ ಪೋಷಕರ ಪಾತ್ರವೂ ಪ್ರಮುಖವಾಗಿದೆ ಎಂದು ಹೇಳಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಶೈಕ್ಷಣಿಕ ವಿಚಾರಗಳನ್ನು ಮಂಡಿಸಿ ಕಾಲೇಜಿನ ವಿದ್ಯಾರ್ಥಿಗಳು ಈಗಾಗಲೇ ಸರಕಾರಿ ಉದ್ಯೋಗ ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಕ್ಯಾಂಪಸ್ ಆಯ್ಕೆಯಂತಹ ಅವಕಾಶಗಳೂ ವಿದ್ಯಾರ್ಥಿಗಳೆಡೆಗೆ ಹರಿದು ಬರುತ್ತಿದೆ. ಅಣೇಕರ ಬೇಡಿಕೆಗೆ ಅನುಗುಣವಾಗಿ ಮುಂದಿನ ಶೈಕ್ಷಣಿಕ ವರ್ಷದಿಮದ ಬಿಸಿಎ ತರಗತಿಗಳನ್ನೂ ಆರಂಭಿಸಲು ಯೋಜಿಸಲಾಗಿದೆ ಎಂದು ಹೇಳಿದರು.
ಅಂಬಿಕಾ ಮಹಾವಿದ್ಯಾಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಗಣೇಶ್ ಪ್ರಸಾದ್ ಎ. ಸ್ವಾಗತಿಸಿ, ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ವಂದಿಸಿದರು. ಐಕ್ಯೂಎಸಿ ಘಟಕದ ಸಂಯೋಜಕ ಚಂದ್ರಕಾಂತ್ ಗೋರೆ ನಿರೂಪಿಸಿದರು.