Sunday, January 19, 2025
ಕೃಷಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ತೋಟಗಾರಿಕಾ ಮಂತ್ರಿಗಳಾದ ಶ್ರೀ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ – ಕಹಳೆ ನ್ಯೂಸ್

ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಹೆಚ್ಚಿನ ರೈತರು ತಮ್ಮ ಜೀವನಾಧಾರಕ್ಕೆ ಅಡಿಕೆಯೊಂದಿಗೆ ರಬ್ಬರ್ ಕೃಷಿಯನ್ನು ಅವಲಂಬಿಸಿದ್ದಾರೆ. ರಬ್ಬರಿನ ಪರ್ಯಾಯ ಕೃಷಿಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಇತ್ತೀಚಿನ ರಬ್ಬರ್ ಮಾರುಕಟ್ಟೆಯಲ್ಲಿ ಉಂಟಾದ ದರ ಕುಸಿತವು ಕೃಷಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ತೋಟಗಾರಿಕಾ ಮಂತ್ರಿಗಳಾದ ಶ್ರೀಮಾನ್ ಮುನಿರತ್ನರವರಿಗೆ ರಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ ಸಲ್ಲಿಸಲಾಯಿತು ಮುಖ್ಯಮಂತ್ರಿ ಗಳೊಂದಿಗೆ ಈ ನಿಟ್ಟಿನಲ್ಲಿ ಚರ್ಚಿಸಿ ಶೀಘ್ರವಾಗಿ ರೈತರಿಗೆ ಅನುಕೂಲವಾಗುವಂತೆ  ಬೆಂಬಲ ಬೆಲೆ ನೀಡುವುದಾಗಿ ಭರವಸೆ ನೀಡಿರುತ್ತಾರೆ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು