Wednesday, January 22, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ವೈದ್ಯರೇ ಗಾಂಜಾ ಜಾಲದಲ್ಲಿದ್ದರೆ ಹೇಗೆ..? ಮಂಗಳೂರು ಪೊಲೀಸರಿಂದ ಭಾರೀ ಕಾರ್ಯಾಚರಣೆ ; ಡಾ. ನದಿಯಾ ಸಿರಾಜ್ , ಡಾ.ಸಮೀರ್, ಡಾ. ಭಾನು ದಹಿಯಾ ಸೇರಿ 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಅಂದರ್..! – ಕಹಳೆ ನ್ಯೂಸ್

ಮಂಗಳೂರು: ಆರೋಗ್ಯ ಹದಗೆಟ್ಟಾಗ ನಾವು ವೈದ್ಯರ ಬಳಿ ಹೋಗೋದು ಸಾಮಾನ್ಯ. ಇಂತಹ ವೈದ್ಯರೇ ವ್ಯಸನಕ್ಕೆ ಒಳಗಾದರೆ? ಅಥವಾ ಅವರೇ ಡ್ರಗ್ಸ್​ ದಂಧೆಯಲ್ಲಿ ತೊಡಗಿದ್ದರೆ? ‘ವೈದ್ಯೋ ನಾರಾಯಣೋ ಹರಿಃ’ ಅನ್ನೋ ಮಾತಿಗೆ ಅರ್ಥವೇ ಇಲ್ಲದಂತೆ ಆಗುತ್ತದೆ. ಇಂತಹ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಎಲ್ಲರಿಗೂ ಆಘಾತ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಂತಹ ವೈದ್ಯರು ಗಾಂಜಾ ನಶೆಯಲ್ಲಿ ಚಿಕಿತ್ಸೆ ನೀಡಿದರೆ ಹೇಗಿರಬಹುದು ಎಂದು ಯೋಚಿಸಿದರೂ ಭಯವಾಗುತ್ತದೆ.

ಇದೀಗ ಮಂಗಳೂರು ಪೊಲೀಸರು ಭಾರೀ ಗಾಂಜಾ ದಂಧೆ ಭೇದಿಸಿದ್ದು ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ಹಾಗೂ ವೈದ್ಯರು ಇದರಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ಯೆನೇಪೋಯಾ, ದೇರಳಕಟ್ಟೆ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಈ ದಂಧೆಯಲ್ಲಿ ಭಾಗಿಯಾಗಿದ್ದರು. ಸದ್ಯ 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಹಾಗೂ ಗಾಂಜಾ ಪೆಡ್ಲರ್​ಗಳು ಸೇರಿ ಒಟ್ಟು 10 ಜನರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.

ಇವರನ್ನು ಗಾಂಜಾ ಸೇವನೆ ಹಾಗೂ ಗಾಂಜಾ ಪೆಡ್ಲಿಂಗ್ ಪ್ರಕರಣದಲ್ಲಿ ಬಂಧಿಸಲಾಗಿದ್ದು ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ(38) ಎನ್ನುವಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲಿಂಗ್ ಕೇಸ್ ನಲ್ಲಿ ರಾಮ್ ಜೀಯನ್ನು ವಶಕ್ಕೆ ಪಡೆದಾಗ ಈತ ಮತ್ತಷ್ಟು ಸ್ಪೋಟಕ ವಿಚಾರಗಳನ್ನು ಬಿಚ್ಚಿಟ್ಟಿದ್ದ. ಆತನ ಮಾಹಿತಿ ಆಧಾರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯರು ಹಾಗೂ ವೈದ್ಯರನ್ನು ವಶಕ್ಕೆ ಪಡೆಯಲಾಗಿದೆ.

ವೈದ್ಯಕೀಯ ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ(26), ಡಾ.ರಿಯಾ ಚಡ್ಡ(22), ಡಾ.ಹೀರಾ ಬಸಿನ್(23)ರನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಇನ್ನು ವೈದ್ಯರಾದ ಡಾ.ಸಮೀರ್(32), ಮಣಿ‌ಮಾರನ್ ಮುತ್ತು(28), ಸ್ಥಳೀಯನಾದ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್(34) ಬಂಧನ ನಡೆದಿದೆ. ಇನ್ನು ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ(27), ಡಾ.ಕ್ಷಿತಿಜ್ ಗುಪ್ತ(23)ರನ್ನೂ ಬಂಧಿಸಲಾಗಿದೆ. ಇವರಿಂದ ಒಟ್ಟು ಎರಡು ಕೆ.ಜಿ‌ ಗಾಂಜಾ, ಒಂದು ನಕಲಿ ಪಿಸ್ತೂಲ್, ಹಾಗೂ ಡ್ಯಾಗರನ್ನು ವಶಕ್ಕೆ ಪಡೆಯಲಾಗಿದೆ.