Friday, January 24, 2025
ಸುದ್ದಿ

ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಮೃತ್ಯು –ಕಹಳೆ ನ್ಯೂಸ್

ಖಾಸಗಿ ಶಾಲಾ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೀಯಪದವಿನ ನಿವಾಸಿಗಳಾದ ಪ್ರೀತೇಶ್ ಶೆಟ್ಟಿ (20), ಅಭಿ ಮೃತಪಟ್ಟ ವಿದ್ಯಾರ್ಥಿಗಳು. ಬೈಕ್ ನಲ್ಲಿದ್ದ ಮತ್ತೋರ್ವ ವಿದ್ಯಾರ್ಥಿಗೆ ಗಾಯವಾಗಿರುವುದಾಗಿ ಎಂದು ತಿಳಿದುಬಂದಿದೆ.

ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶುಕ್ರವಾರ ಬೆಳಿಗ್ಗೆ ಶಾಲಾ ವಾಹನಕ್ಕೆ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.