Friday, November 22, 2024
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಬಸ್ ನಲ್ಲಿ ಅನ್ಯಮತೀಯ ಯುವತಿಯ ಪಕ್ಕದಲ್ಲಿ ಬಂದು ಕುಳಿತು ಚಾಕಲೇಟ್ ಬೇಕೇ ಎಂದು ಕಿಚಾಯಿಸಲು ಯತ್ನಿಸಿದ ಮಹಮ್ಮದ್ ಶಾಕೀರ್..! ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ಬಿತ್ತು ಗೂಸಾ..! ಕೇಸ್ ದಾಖಲು – ಕಹಳೆ ನ್ಯೂಸ್

ವಿಟ್ಲ : ಬಸ್‌ನಲ್ಲಿ ಅನ್ಯಮತೀಯ ವಿದ್ಯಾರ್ಥಿನಿಗೆ ಚಾಕಲೇಟ್ ಬೇಕಾ, ಎಂದು ಚುಡಾಯಿಸಲು ಯತ್ನಿಸಿದ ಅನ್ಯ ಮತದ ವಿದ್ಯಾರ್ಥಿಗೆ ಹಿಂದೂ ಸಂಘಟನೆಗೆ ಸೇರಿದ ಯುವಕರು ಗೂಸಾ ನೀಡಿದ ಘಟನೆ ನಡೆದಿದೆ., ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಮಹಮ್ಮದ್‌ ಶಾಕೀರ್‌ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಬಲ್ಮಠದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಶಾಕೀರ್‌ ವಿದ್ಯಾಭ್ಯಾಸ ಮಾಡುತ್ತಿದ್ದು ಕಾಲೇಜು ಮುಗಿಸಿ ಕೆ.ಎಸ್‌.ಆರ್‌.ಟಿ.ಸಿ. ಬಸ್‌ನಲ್ಲಿ ಗುರುವಾರ ರಾತ್ರಿ ಮನೆಗೆ ಬರುತ್ತಿದ್ದಾಗ ಈತನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೇ ಎಂದು ಕೇಳಿದ್ದ ಎನ್ನಲಾಗಿದೆ. ಬಸ್‌ ವೀರಕಂಬ ಗ್ರಾಮದ ಕೆಲಿಂಜಕ್ಕೆ ತಲುಪಿದಾಗ ಏಕಾಏಕಿಯಾಗಿ ನುಗ್ಗಿದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಶಾಕೀರ್‌ ಪೊಲೀಸರಿಗೆ ದೂರು ನೀಡಿದ್ದಾರೆ.