ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಇವರ 2ನೇ ದಿನದ ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಾಯಾತ್ರೆ ಸಂದರ್ಭದಲ್ಲಿ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ – ಕಹಳೆ ನ್ಯೂಸ್
ಜ.15 ರಂದು ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭಾ ಕ್ಷೇತ್ರದಿಂದ ಆರಂಭಗೊಂಡ 2 ನೇ ದಿನದ ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಾಯಾತ್ರೆ ಸಂದರ್ಭದಲ್ಲಿ
ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಮುಂಬಯ ಮಹಾನಗರ ಪಾಲಿಕೆ ಸದಸ್ಯ ರಾದ ಸಂತೋಷ್ ಶೆಟ್ಟಿ ದಳಂದಿಲ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಒಳಚರಂಡಿ ನಿಗಮ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಪ್ರಮುಖರಾದ ಮಾದವ ಮಾವೆ, ಸುದರ್ಶನ್ ಬಜ ಮತ್ತಿತರರು ಉಪಸ್ಥಿತರಿದ್ದರು.