Recent Posts

Sunday, January 19, 2025
ಸುದ್ದಿ

ಸೆಪ್ಟೆಂಬರ್ 25 ರಂದು ದೇಶದಾದ್ಯಂತ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ; ಆಯುಷ್ಮಾನ್ ಭಾರತ್ ಯೋಜನೆ ವಿಶೇಷವೇನು ಗೊತ್ತಾ? – ಕಹಳೆ ನ್ಯೂಸ್

ಸ್ವಾತಂತ್ರ್ಯ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಖುಷಿ ಸುದ್ದಿ ನೀಡಿದ್ದಾರೆ. ಸೆಪ್ಟೆಂಬರ್ 25 ರಂದು ದೇಶದಾದ್ಯಂತ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರಲಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಸೆಪ್ಟೆಂಬರ್ 25ರಂದು ಪಂಡಿತ್ ದೀನ ದಯಾಳ್ ಉಪಾಧ್ಯಾಯ್ ಜನ್ಮದಿನ. ಇದೇ ದಿನ ನರೇಂದ್ರ ಮೋದಿಯವರ ಜನ ಆರೋಗ್ಯ ಯೋಜನೆ ಕೂಡ ಜಾರಿಗೆ ಬರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಯೋಜನೆಯಡಿ ದೇಶದ 10 ಕೋಟಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಆರೋಗ್ಯ ವಿಮೆ ಸಿಗಲಿದೆ. ಇದೊಂದು ಕ್ಯಾಶ್ಲೆಸ್ ಯೋಜನೆಯಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಪ್ರತಿಯೊಂದು ರೋಗಕ್ಕೂ ಒಂದು ರೇಟ್ ನಿರ್ಧರಿಸಲಾಗಿದೆ. ಈ ರೇಟ್ ಅಡಿಯಲ್ಲಿ ಆಸ್ಪತ್ರೆಗಳಿಗೆ ಹಣ ಪಾವತಿಯಾಗಲಿದೆ. ಹಣ ರೋಗಿಗಳಿಗೆ ಸಿಗುವುದಿಲ್ಲ. ನೇರವಾಗಿ ಆಸ್ಪತ್ರೆಗೆ ಸಂದಾಯವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಗಸ್ಟ್ 15ರ ನಂತ್ರ 5-6 ವಾರಗಳ ಕಾಲ ಪರೀಕ್ಷೆ ನಡೆಯಲಿದ್ದು, ಇದಾದ ನಂತ್ರ ಆಯುಷ್ಮಾನ್ ಯೋಜನೆ ಜಾರಿಗೆ ಬರಲಿದೆ ಎಂದು ಮೋದಿ ಹೇಳಿದ್ದಾರೆ. ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಸಿಗಲಿದೆ. ಅನೇಕ ಆಸ್ಪತ್ರೆಗಳು ತಲೆ ಎತ್ತಲಿವೆ.